ನವದೆಹಲಿ: 2021 ರ ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ (ತಿದ್ದುಪಡಿ) ಕಾಯ್ದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಅಂಕಿತ ಹಾಕಿದ್ದಾರೆ. ಈ ಮೂಲಕ ಇನ್ನು ಮುಂದೆ ದೆಹಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಅಲ್ಲಿನ ಸರ್ಕಾರಕ್ಕಿಂತ ಹೆಚ್ಚಿನ ಅಧಿಕಾರ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಇರುತ್ತದೆ.
ದೆಹಲಿಯ ವಿಧಾನಸಭಾ ಅಸೆಂಬ್ಲಿಯಲ್ಲಿ ತರಲಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಅನ್ನು ಸೂಚಿಸುತ್ತದೆ ಎಂದು ಈ ಕಾಯ್ದೆಯು ಹೇಳುತ್ತದೆ.
ಕಳೆದ ವಾರ ಸಂಸತ್ತು ಈ ಕಾಯ್ದೆಯನ್ನು ಅಂಗೀಕರಿಸಿತ್ತು. ಇದೀಗ ರಾಷ್ಟ್ರಪತಿಗಳ ಅಂಕಿತದೊಂದಿಗೆ ಮಸೂದೆ ಕಾಯ್ದೆಯಾಗಿ ಅನುಷ್ಠಾನಕ್ಕೆ ಬಂದಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಮತ್ತು ಡೆವಲಪ್ಮೆಂಟ್ ಆಕ್ಟ್, 2021 ಮತ್ತು ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ, 2021 ಗಳಿಗೂ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.