ಯಾಂಗೂನ್: ಮಯನ್ಮಾರಿನಲ್ಲಿ ಸೇನಾ ಆಡಳಿತ ಹಿಂಸಾ ರೂಪವನ್ನು ಪಡೆದುಕೊಳ್ಳುತ್ತಿದೆ. ಜನರ ಪ್ರತಿಭಟನೆಯನ್ನು ಹತ್ತಿಕ್ಕಲು ಅಲ್ಲಿನ ಮಿಲಿಟರಿ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಸಾವಿರಾರು ಮಂದಿ ಥಾಯ್ಲೆಂಡಿನತ್ತ ವಲಸೆ ಹೋಗುತ್ತಿದ್ದಾರೆ.
ವೈಮಾನಿಕ ದಾಳಿಯಿಂದ ತಪ್ಪಿಸಿಕೊಳ್ಳಲು ಥಾಯ್ಲೆಂಡ್ನತ್ತ ಪಲಾಯನ ಮಾಡುತ್ತಿರುವ ಕೆರೆನ್ ಸಮುದಾಯದವರನ್ನು ನಿಯಂತ್ರಿಸಲು ಅಧಿಕಾರಿಗಳು ಸೋಮವಾರ ವಾಯುವ್ಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಯನ್ಮಾರ್ ಮಿಲಿಟರಿ ಯುದ್ಧ ವಿಮಾನಗಳು ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೂ ಮೂರು ವೈಮಾನಿಕ ದಾಳಿಗಳನ್ನು ನಡೆಸಿದ ಎಂದು ಫ್ರೀ ಬರ್ಮಾ ರೇಂಜರ್ಸ್ ಸಂಸ್ಥೆ ತಿಳಿಸಿದೆ. ಈ ಸಂಸ್ಥೆ ಕರೆನ್ ಸಮುದಾಯದ ಜನರಿಗೆ ಔಷದೋಪಚಾರ ಸೇರಿದಂತೆ ವಿವಿಧ ರೀತಿಯ ಪರಿಹಾರವನ್ನು ಒದಗಿಸುತ್ತಿದೆ.
ಮಿಲಿಟರಿ ನಡೆಸಿದ ವೈಮಾನಿಕ ದಾಳಿಯಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸಂಸ್ಥೆ ಹೇಳಿದೆ.
ಮಯನ್ಮಾರ್ ಸೇನಾಡಳಿತ ಕರೆನ್ ರಾಜ್ಯದ ಮುಟ್ರಾ ಜಿಲ್ಲೆಯ ಸಾಲ್ವಿಯ ನದಿ ವ್ಯಾಪ್ತಿಯಲ್ಲಿರುವ ಕರೆನ್ ಗೆರಿಲ್ಲಾ ಗುಂಪುಗಳಿದ್ದ ಪ್ರದೇಶದ ಮೇಲೆ ಬಾಂಬ್ ದಾಳಿ ನಡೆಸಿವೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಕರೆನ್ ಜನರು ಹೆಚ್ಚಿನ ಸ್ವಾಯತ್ತತೆ ಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಇವರನ್ನು ಹತ್ತಿಕ್ಕಲು ಸೇನೆ ವೈಮಾನಿಕ ದಾಳಿ ನಡೆಸಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.