ಬೆಂಗಳೂರು: ರಾಜ್ಯದಲ್ಲಿ ಸ್ಥಗಿತವಾಗಿರುವ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ಗಳನ್ನು ಶರತ್ತುಬದ್ಧವಾಗಿ ಪುನರಾರಂಭ ಮಾಡಲು ಶೀಘ್ರವೇ ಅನುಮತಿ ನೀಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಗಣಿಗಳನ್ನು ಮತ್ತೆ ಆರಂಭ ಮಾಡಲು ಬಯಸುವವರು ಗಣಿ ಮತ್ತು ಸುರಕ್ಷತಾ ಮಹಾನಿರ್ದೇಶಕರಿಂದ ಅನುಮತಿಯನ್ನು ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದರು. ಪರವಾನಗಿಯನ್ನು ಪಡೆಯದೆಯೇ ಗಣಿಗಳನ್ನುಮತ್ತೆ ಆರಂಭ ಮಾಡುವುದು ಸಾಧ್ಯವಿಲ್ಲ. ಮುಚ್ಚಳಿಕೆ ಬರೆಸಿಕೊಂಡು ಬಳಿಕ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿಕೊಂಡಂತೆ ಗಣಿಗಾರಿಕೆ ನಡೆಸಲು ಸಮ್ಮತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಜಿಲೆಟಿನ್ ಸ್ಪೋಟದಿಂದಾದ ಅನಾಹುತದ ಬಳಿಕ ರಾಜ್ಯದಲ್ಲಿ ಹೆಚ್ಚಿನ ಗಣಿಗಳು ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಆರಂಭಿಸಲು ಬಯಸುವವರು ಸೂಕ್ತ ದಾಖಲೆಗಳನ್ನು ಸಲ್ಲಿಸಿ ಸಮ್ಮತಿ ಪಡೆಯಲು ಅವಕಾಶವನ್ನು ಕಲ್ಪಿಸಿಕೊಡುವ ಭರವಸೆಯನ್ನೂ ಅವರು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.