ಬೆಂಗಳೂರು: ರಾಜ್ಯದ ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ವಾರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಚರಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಅದರ ಸ್ವರೂಪದ ಬಗ್ಗೆ ಸಾರಿಗೆ ನಿಗಮಗಳು, ಸಂಬಂಧಪಟ್ಟ ನಿಗಮಗಳ ಹಿರಿಯ ಅಧಿಕಾರಿಗಳ ಜೊತೆಗೆ ಹಲವು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ. ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಈ ವರೆಗೆ ಸಾರಿಗೆ ನೌಕರರ 9 ಮುಖ್ಯ ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಇರುವ ಬೇಡಿಕೆ ಬಾಕಿ ಉಳಿದಿದ್ದು ಈ ಬಗ್ಗೆಯೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ಅವರು ಪ್ರಕಟಿಸಿದ್ದಾರೆ. ಕೊರೋನಾದಿಂದ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರು ಕಂಗಾಲಾಗಿದ್ದಾರೆ. ಅವರಿಗೆ ತೊಂದರೆಯಾಗದಂತೆ ಯಾವುದೇ ಪ್ರತಿಭಟನೆಗಳನ್ನು ನಡೆಸದೆ ಸಅರಿಗೆ ನೌಕರರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.