ಬೆಂಗಳೂರು: ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೂ ಸಮವಸ್ತ್ರ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದ ಪೊಲೀಸ್ ಇಲಾಖೆಯ ಸಿಬ್ಬಂದಿಗಳಂತೆಯೇ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ಸಿಬ್ಬಂದಿಗಳು ಸಹ ಸಮವಸ್ತ್ರ ಧರಿಸಿ ಕಾರ್ಯ ನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ ಶೀಘ್ರದಲ್ಲೇ ಸಮವಸ್ತ್ರಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಗಣಿ ಅಧಿಕಾರಿಗಳಿಗೆ ಅವರ ಸ್ಥಾನಮಾನಗಳಿಗನುಗುಣವಾಗಿ ಗ್ರೇಡ್, ಸ್ಟಾರ್ ನೀಡುವುದಕ್ಕೂ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸಿಬ್ಬಂದಿಗಳಿಗೆ ನೀಡಲಾಗುವ ಸಮವಸ್ತ್ರದಲ್ಲಿ ಬೆಲ್ಟ್, ಹ್ಯಾಟ್ಗಳಲ್ಲಿ ಪ್ರತ್ಯೇಕ ಲಾಂಛನದ ಗುರುತು ಇರಲಿದೆ. ಇದು ಸಿಬ್ಬಂದಿಗಳನ್ನು ಗುರುತಿಸುವುದಕ್ಕೆ ಹೆಚ್ಚು ಅನುಕೂಲ ಮಾಡಿಕೊಡಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಿಬ್ಬಂದಿಗಳಲ್ಲಿ ಗಂಭೀರತೆಯೂ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಸೇನೆಯಿಂದ ನಿವೃತ್ತರಾದ ಯೋಧರನ್ನೂ ಭದ್ರತಾ ಅಧಿಕಾರಿಗಳಾಗಿ ನೇಮಿಸಿಕೊಳ್ಳುವ ಸಂಬಂಧ ಚಿಂತನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.