ಮಂಗಳೂರು: ರಾಜ್ಯದ ಪೊಲೀಸರ ದೈಹಿಕ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ, ತೂಕ ಇಳಿಕೆಗೂ ಪೂರಕವಾಗುವಂತೆ ʼದೈಹಿಕ ಸಾಮರ್ಥ್ಯ ಬಲವರ್ಧನೆ ಕಾರ್ಯಾಗಾರʼವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ದೈಹಿಕ ಸಾಮರ್ಥ್ಯ ಬಲವರ್ಧನೆ ಮತ್ತು ದೈಹಿಕ ಸದೃಢತೆ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿಭಾಗವಹಿಸಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ತೂಕವನ್ನು ಹತೋಟಿಯಲ್ಲಿಡುವುದಕ್ಕೆ ಸಂಬಂಧಿಸಿದಂತೆ ಪ್ರಯೋಗಗಳು ಕೆಎಸ್ಆರ್ಪಿಯಲ್ಲಿ ಈಗಾಗಲೇ ನಡೆದಿವೆ. ಇಂತಹ ಕಾರ್ಯಗಾರ ರಾಜ್ಯದೆಲ್ಲೆಡೆ ನಡೆಯಬೇಕಾಗಿದೆ. ಶೀಘ್ರದಲ್ಲೇ ಈ ಸಂಬಂಧ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.