ಬೆಂಗಳೂರು: ರಾಜ್ಯದ ಕಡಲ ತೀರಗಳನ್ನು ಅಭಿವೃದ್ಧಿ ಮಾಡಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೂಸ್ಟ್ ನೀಡುವ ಹಿನ್ನೆಲೆಯಲ್ಲಿ ʼವಿಷನ್ ಗ್ರೂಪ್ʼ ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದ ಆರ್ಥಿಕ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿಯೂ ಈ ಯೋಜನೆ ಮಹತ್ವಪೂರ್ಣವಾಗಿದೆ.
ಈ ಸಂಬಂಧ ಈ ಹಿಂದೆ ಫಿಕ್ಕಿ ಸಲ್ಲಿಸಿದ್ದ ಮನವಿಗೆ ಸಚಿವ ಜಗದೀಶ್ ಶೆಟ್ಟರ್ ಅವರು ಸ್ಪಂದಿಸಿದ್ದು, ಅವರ ಸೂಚನೆಯನ್ವಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ. ಸರಕಾರದ ಒಪ್ಪಿಗೆ ದೊರೆತಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವಿಷನ್ ಗ್ರೂಪ್ ಸಹ ರಚನೆಯಾಗಲಿದೆ ಎಂದು ಮೂಲಗಳು ಹೇಳಿವೆ.
ರಾಜ್ಯದಲ್ಲಿ ಸುಮಾರು 320 ಕಿಮೀ ಗಳಷ್ಟು ಉದ್ದದ ಕಡಲ ತೀರವಿದ್ದು, ಇದನ್ನು ಯೋಜಿತ ರೀತಿಯಲ್ಲಿ ಸಿದ್ಧಪಡಿಸುವ ನಿಟ್ಟಿನಲ್ಲಿ, ಆರ್ಥಿಕ ಯೋಜನೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಗ್ರೂಪ್ ಸಿದ್ಧವಾಗಿದೆ. ಈ ಯೋಜನೆಯಂತೆ ರಾಜ್ಯದಲ್ಲಿ ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವುದು, ಧಾರ್ಮಿಕ, ಅಕ್ವಾ ಟೂರಿಸಂ, ಕ್ರೂಸ್ ವ್ಯವಸ್ಥೆಗೆ ಉತ್ತೇಜನ ನೀಡುವುದು, ಬ್ಯಾಂಕಿಂಗ್, ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ವಿಚಾರಗಳನ್ನೊಳಗೊಂಡಂತೆ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.