ಬೆಂಗಳೂರು: ನೆರೆಯ ಕೇರಳ, ತಮಿಳುನಾಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಭದ್ರತೆ ನೀಡಲು ರಾಜ್ಯದ ಪೊಲೀಸ್ ಪಡೆಗಳು ತೆರಳಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗ ತಿಳಿಸಿರುವಂತೆ ರಾಜ್ಯದ ಪೊಲೀಸ್ ಪಡೆ ನೆರೆ ರಾಜ್ಯಗಳಿಗೆ ತೆರಳಲಿವೆ ಎಂದು ಅವರು ನುಡಿದಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಎರಡು ವಿಧಾನಸಭಾ ಮತ್ತು ಒಂದು ಲೋಕ ಸಭಾ ಕ್ಷೇತ್ರಗಳಿಗೆ ತೆರವಾಗಿರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿಯೂ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳು ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಿದ್ದಾರೆ. ಹಾಗೆಯೇ ಕಾಂಗ್ರೆಸ್ ಆಡಳಿತಾವಧಿಯಲ್ಲಿದ್ದ ಕಾನೂನು ಸುವ್ಯವಸ್ಥೆಗಿಂತ ಹೆಚ್ಚು ಉತ್ತಮ ವ್ಯವಸ್ಥೆ ಬಿಜೆಪಿ ಆಡಳಿತದಲ್ಲಿದೆ. ಈ ಸಂಬಂಧ ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಅನಗತ್ಯವಾಗಿ ಸೃಷ್ಟಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.