ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಶ್ನಿಸಿದರೆ, ಮಮತಾ ಬ್ಯಾನರ್ಜಿ ಏಕೆ ಮೌನ ತಾಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಹಿಂಸಾಚಾರ, ಮಹಿಳಾ ದೌರ್ಜನ್ಯಗಳಂತಹ ಕೃತ್ಯಗಳು ನಡೆಯುತ್ತಿದ್ದರೂ ಮಮತಾ ಮಾತ್ರ ಮೌನವಾಗಿದ್ದಾರೆ. ಮಹಿಳಾ ಸುರಕ್ಷತೆಯ ಬಗ್ಗೆ ಭಾಷಣ ಬಿಗಿಯುವ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಮಹಿಳೆಯರಿಗೆ ನಿಜವಾದ ರೀತಿಯಲ್ಲಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.
ನಂದೀಗ್ರಾಮದಲ್ಲಿ ನಾವು ಜನರ ಉತ್ಸಾಹವನ್ನು ಕಾಣುತ್ತಿದ್ದೇವೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರು ನಿಸ್ಸಂಶಯವಾಗಿ ಜಯಗಳಿಸುತ್ತಾರೆ ಎಂಬ ನಂಬಿಕೆಯೂ ನಮಗಿದೆ. ಇಲ್ಲಿ ಮಮತಾ ಬ್ಯಾನರ್ಜಿ ಪಕ್ಷವನ್ನು ಸೋಲಿಸುವುದು, ಪಶ್ಚಿಮ ಬಂಗಾಳದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಹಿನ್ನೆಲೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಶಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.