ಚೆನ್ನೈ: ತಮಿಳುನಾಡಿನ ಧರಪುರಂನಲ್ಲಿ ಇಂದು ಚುನಾವಣಾ ಪ್ರಚಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ನಾವೆಂದಿಗೂ ಜನರ ಸೇವೆಗೆ ಸಿದ್ಧರಾಗಿದ್ದೇವೆ. ರೈತರು, ಬಡವರು, ಯುವಕರು ಮತ್ತು ಮಹಿಳೆಯರ ಸಬಲೀಕರಣವನ್ನು ಬಿಜೆಪಿ ಬಯಸುತ್ತಿದೆ. ಬಿಜೆಪಿ ಪ್ರಣಾಳಿಕೆಯನ್ನು ಸರಿಯಾಗಿ ಓದಿ ನಿರ್ಧರಿಸಿ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಡಿಎಂಕೆ ತನ್ನ ಹಳೆಯ 2G ಕ್ಷಿಪಣಿಯನ್ನು ಉಡಾವಣೆ ಮಾಡಿದೆ. ಅವರ ಗುರಿ ಕೇವಲ ನಾರಿ ಶಕ್ತಿಯ ಮೇಲೆ ದಾಳಿ ಮಾಡಲು ಬಯಸುವುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು.
ತಮಿಳುನಾಡಿನಲ್ಲಿ ಇತ್ತೀಚೆಗೆ ಚುನಾವಣಾ ಪ್ರಚಾರ ಸಂದರ್ಭ ಡಿಎಂಕೆ ನಾಯಕ ಎ. ರಾಜಾ ಅವರು ಮುಖ್ಯಮಂತ್ರಿ ಪಳನಿಸ್ವಾಮಿ ತಾಯಿಯ ಕುರಿತು ಇತ್ತೀಚೆಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಈ ರೀತಿ ಹೇಳಿದರು ಎನ್ನಲಾಗಿದೆ. ಮುಂದುವರೆದು, ಅವರು ಅಧಿಕಾರಕ್ಕೆ ಬಂದರೆ ರಾಜ್ಯದ ಇನ್ನಷ್ಟು ಮಹಿಳೆಯರನ್ನು ಅವಮಾನಿಸುತ್ತಾರೆ ಎಂದು ಪ್ರಧಾನಿ ಈ ಸಂದರ್ಭ ಹೇಳಿದರು.
ಕೆಲವೇ ದಿನಗಳಲ್ಲಿ ತಮಿಳುನಾಡು ಹೊಸ ವಿಧಾನಸಭೆಯನ್ನು ಅಲಂಕರಿಸಲಿದೆ. ರಾಜ್ಯದಲ್ಲಿ ಜನರ ಸೇವೆ ಮಾಡುವುದಕ್ಕಾಗಿ ಎನ್ಡಿಎಯು ನಿಮ್ಮ ಆಶೀರ್ವಾದ ಬಯಸುತ್ತಿದೆ ಎಂದು ಮತದಾರರಲ್ಲಿ ಕೋರಿಕೊಂಡರು.
ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.