ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ನಿರ್ಧರಿತವಾಗಿರುವ ಕೋಲ, ಪೂಜೆ, ಪುನಸ್ಕಾರ ಇತ್ಯಾದಿ ಕಾರ್ಯಕ್ರಮಗಳನ್ನು ಸೀಮಿತ ಜನರನ್ನು ಒಳಗೊಂಡಂತೆ, ಎಲ್ಲಾ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡಂತೆ ನಡೆಸಬಹುದಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಒಳಗೊಂಡಂತೆ ಇನ್ಯಾವುದೇ ರೀತಿಯ ಸಭೆ ಸಮಾರಂಭಗಳಿಗೆ ಅನುಮತಿ ಇಲ್ಲ. ಕೊರೋನಾ ಕಾರಣದಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಅನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ಕೋಟ, ಈಗಾಗಲೇ ಪೂರ್ವನಿಗದಿತ ಧಾರ್ಮಿಕ ಕ್ರಮಗಳನ್ನು ಸೀಮಿತ ಜನರ ಸಮ್ಮುಖದಲ್ಲಿ ಮಾಡುವುದಕ್ಕೆ ಅನುಮತಿ ಇದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶದ ಬಳಿಕ ಜನರಲ್ಲಿ ಮೂಡಿದ್ದ ಗೊಂದಲವನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸುವುದಾಗಿಯೂ ತಿಳಿಸಿದ್ದಾರೆ. ಈಗಾಗಲೇ ಮುಹೂರ್ತ ಇರಿಸಿರುವ ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ ಎಂಬುದಾಗಿಯೂ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.