ಮಂಗಳೂರು: ರಾಜ್ಯದಲ್ಲಿ ಎ. 1 ರಿಂದ ಆರಂಭವಾಗುವಂತೆ 45 ವರ್ಷಗಳಿಂದ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳ ಹೆಚ್ಚಳಕ್ಕೆ ಸರ್ಕಾರ ವ್ಯವಸ್ಥೆ ಕಲ್ಪಿಸುತ್ತಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಸಚಿವರು, ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದರು.
ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ಲಸಿಕೆ ವಿತರಣೆ ಮಾಡುವುದಕ್ಕೆ ಸಂಬಂಧಿಸಿದಂತೆ 3000 ಕ್ಕಿಂತಲೂ ಹೆಚ್ಚಿನ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸದ್ಯದಲ್ಲೇ 2000 ಗಳಷ್ಟು ಲಸಿಕಾ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಒಟ್ಟು 5000 ಗಳಷ್ಟು ಲಸಿಕಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡುವುದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.