ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಂತೆ ರೈತರು ಬ್ಯಾಂಕುಗಳು, ವಿಮೆ ಕಂಪೆನಿಗಳು, ಸಂಬಂಧಿಸಿದ ಇಲಾಖೆಗಳ ಕುಂದುಕೊರತೆ, ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ತಾಲ್ಲೂಕು, ಜಿಲ್ಲಾ, ರಾಜ್ಯಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ತಾಲ್ಲೂಕು ಮಟ್ಟದಲ್ಲಿ ಈ ಸಮಿತಿಗೆ ಅಧ್ಯಕ್ಷರಾಗಿ ತಹಶೀಲ್ದಾರ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಇವರೊಂದಿಗೆ ಇತರ 6 ಮಂದಿ ಸದಸ್ಯರು ಈ ಸಮಿತಿಯಲ್ಲಿ ಸದಸ್ಯರಿರಲಿದ್ದಾರೆ. ಜಿಲ್ಲಾ ಮಟ್ಟಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು, ಜಿ. ಪಂ. ಸಿಇಒ ಸಹ ಅಧ್ಯಕ್ಷರಾಗಿರಲಿದ್ದಾರೆ. ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕ ಸದಸ್ಯ ಕಾರ್ಯದರ್ಶಿ ಮತ್ತು ಇತರ 8 ಮಂದಿ ಸದಸ್ಯರಿರಲಿದ್ದಾರೆ. ರಾಜ್ಯ ಮಟ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗ ಅಧ್ಯಕ್ಷರಾಗಿರಲಿದ್ದು, ತೋಟಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಹ ಅಧ್ಯಕ್ಷರಾಗಿರಲಿದ್ದಾರೆ. ಇತರ 11 ಮಂದಿ ಸದಸ್ಯರನ್ನು ಈ ಸಮಿತಿ ಒಳಗೊಂಡಿರಲಿದೆ.
ರೈತರು, ಬ್ಯಾಂಕ್ಗಳು, ಮಿಮಾ ಕಂಪೆನಿಗಳು, ಇತರ ಇಲಾಖೆಗಳ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಏಳು ದಿನಗಳ ಒಳಗಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ಸಮಸ್ಯೆ ಪರಿಹಾರವಾಗದೇ ಇದ್ದಲ್ಲಿ, ಜಿಲ್ಲಾ ಮಟ್ಟದ ಸಮಿತಿ, ಬಳಿಕ ರಾಜ್ಯ ಮಟ್ಟದ ಸಮಿತಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಸಲ್ಲಿಸುವಂತೆ ಎಚ್ಚರ ವಹಿಸಬೇಕು ಎಂಬುದಾಗಿಯೂ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.