ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಾಳೆ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಇದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣೆಗಳನ್ನು ಸುಗಮವಾಗಿ ನಡೆಸಲು ಸಾಕಷ್ಟು ಸಂಖ್ಯೆಯ ಇವಿಎಂ ಮತ್ತು VVPATಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲಾಗಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ, ಚುನಾವಣಾ ಆಯೋಗವು 1,500 ಮತದಾರರ ಹಿಂದಿನ ಷರತ್ತನ್ನು ಬದಲಾಯಿಸಿ ಗರಿಷ್ಠ 1,000 ಮತದಾರರನ್ನು ಮತಗಟ್ಟೆಗೆ ಅನುಮತಿಸಲು ನಿರ್ಧರಿಸಿದೆ. ಕೋವಿಡ್- 19 ಸೋಂಕಿತರಿಗೆ ಅಥವಾ ಪ್ರಮಾಣೀಕರಿಸಲ್ಪಟ್ಟ ಶಂಕಿತರಿಗೆ ಮತ್ತು ಮನೆ ಅಥವಾ ಸಾಂಸ್ಥಿಕ ಕ್ಯಾರೆಂಟೈನ್ನಲ್ಲಿರುವ ವ್ಯಕ್ತಿಗಳಿಗೆ ಮತ್ತು ವಿಕಲಾಂಗ ವ್ಯಕ್ತಿಗಳಿಗೆ (ಪಿಡಬ್ಲ್ಯುಡಿ) ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಅಂಚೆ ಮತಪತ್ರದ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ಅಸ್ಸಾಂನಲ್ಲಿ, 13 ಜಿಲ್ಲೆಗಳಲ್ಲಿ ಹರಡಿರುವ 39 ವಿಧಾನಸಭಾ ಕ್ಷೇತ್ರಗಳಿಗೆ 26 ಮಹಿಳೆಯರು ಸೇರಿದಂತೆ 345 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. 36.09 ಲಕ್ಷ ಮಹಿಳೆಯರು ಮತ್ತು 135 ತೃತೀಯ ಲಿಂಗಿ ವ್ಯಕ್ತಿಗಳು ಸೇರಿದಂತೆ 73.44 ಲಕ್ಷ ಮತದಾರರು ಈ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಇಲ್ಲಿ ಒಟ್ಟು 10,592 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ, ಎರಡನೇ ಹಂತದಲ್ಲಿ ನಾಲ್ಕು ಜಿಲ್ಲೆಗಳ 30 ಸ್ಥಾನಗಳಿಗೆ 19 ಮಹಿಳೆಯರು ಸೇರಿದಂತೆ 171 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. 37.12 ಲಕ್ಷ ಮಹಿಳೆಯರು ಮತ್ತು 89 ತೃತೀಯ ಲಿಂಗಿಗಳು ಸೇರಿದಂತೆ 75.95 ಲಕ್ಷ ಮತದಾರರು ಈ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಇಲ್ಲಿ 10,620 ಕ್ಕೂ ಹೆಚ್ಚು ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.