ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಕಾವು ಏರತೊಡಗಿದ್ದು, ಹಿಂಸಾಚಾರಗಳು ಅಲ್ಲಲ್ಲಿ ಭುಗಿಲೇಳುತ್ತಿವೆ. ಮಂಗಳವಾರ ಅಪರಿಚಿತರ ಗುಂಪು ಬಿಜೆಪಿ ಅಭ್ಯರ್ಥಿ ಹಾಗೂ ಮಾಕಿ ಕ್ರಿಕೆಟಿಗ ಅಶೋಕ್ ದಿಂಡಾ ಅವರ ಮೇಲೆ ಹಲ್ಲೆ ನಡೆಸಿದೆ. ಟಿಎಂಸಿ ಗೂಂಡಾಗಳು ಈ ಕೃತ್ಯ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಘಟನೆಯ ನಂತರ ಅಶೋಕ್ ದಿಂಡಾ ಅವರಿಗೆ ವೈ + ಭದ್ರತೆ ನೀಡಲಾಗಿದೆ. ಮಾಜಿ ಕ್ರಿಕೆಟಿಗನಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಭದ್ರತೆ ನೀಡಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಚುನಾವಣಾ ಪ್ರಚಾರ ನಡೆಸಿ ದಿಂಡಾ ಹಿಂದಿರುಗುತ್ತಿದ್ದಾಗ, ಜನಸಮೂಹವೊಂದು ಅವರ ಕಾರನ್ನು ಮೊಯ್ನಾ ಬಜಾರ್ ಬಳಿ ಸುತ್ತುವರೆದು ಕಲ್ಲು ತೂರಾಟ ನಡೆಸಿತು. ಅವರ ಕಾರಿನ ಕಿಟಕಿಗಳ ಗಾಜು ಮುರಿದಿದೆ ಮತ್ತು ಅವರ ಭುಜದ ಮೇಲೆ ಗಾಯಗಳಾಗಿವೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ದಾಳಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಮೊಯ್ನಾ ವಿಧಾನಸಭಾ ಕ್ಷೇತ್ರದ ಮತದಾನ ಎರಡನೇ ಹಂತದಲ್ಲಿ ಏಪ್ರಿಲ್ 1 ರಂದು ನಡೆಯಲಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದಿಂಡಾ ಕಣಕ್ಕಿಳಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.