ನವದೆಹಲಿ: ತ್ರಿವಿಧ ದಾಸೋಹಿ, ಕಾಯಕಯೋಗಿ, ಲಿಂಗೈಕ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ 114ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೂ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಸ್ಮರಿಸಿಕೊಂಡಿದ್ದಾರೆ.
ಟ್ವಿಟರ್ನಲ್ಲಿ ಸ್ವಾಮಿಗಳ ಜೊತೆಗಿರುವ ಫೋಟೋ ಹಂಚಿಕೊಂಡಿರುವ ಮೋದಿ, “ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಅವರ ಜಯಂತಿಯಂದು ನಾನು ತಲೆ ಬಾಗುತ್ತೇನೆ ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರ ಆರೈಕೆಗಾಗಿ ಅವರು ಮಾಡಿದ ಅಸಂಖ್ಯಾತ ಪ್ರಯತ್ನಗಳು ವ್ಯಾಪಕವಾಗಿ ಸ್ಮರಿಸಲ್ಪಡುತ್ತಿವೆ. ಅವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳಿಂದ ನಾವು ಆಳವಾಗಿ ಪ್ರೇರಿತರಾಗಿದ್ದೇವೆ” ಎಂದಿದ್ದಾರೆ.
ಕೋವಿಡ್ ಕಾರಣದಿಂದಾಗಿ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶ್ರೀಗಳ ಜಯಂತಿಯನ್ನು ಗುರುವಾರ ಸರಳವಾಗಿ ಆಚರಣೆ ಮಾಡಲಾಗಿದೆ. ಮಠಾಧೀಶ ಸಿದ್ಧಲಿಂಗ ಸ್ವಾಮೀಜಿ ಅವರು ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.
I bow to His Holiness Dr. Sree Sree Sree Sivakumara Swamigalu on his Jayanti. His innumerable efforts to serve society and care for the poor are widely remembered. We are deeply inspired by his noble thoughts and ideals. pic.twitter.com/m3tV461wR3
— Narendra Modi (@narendramodi) April 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.