ಬೆಂಗಳೂರು: ರಾಜ್ಯದಲ್ಲಿ ಜಲಸಂಪನ್ಮೂಲ ಸಚಿವರ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ನೀರಾವರಿ ನಿಗಮಗಳ ಅಧಿಕಾರಿಗಳ ಜೊತೆಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ರಾಜ್ಯಾದ್ಯಂತ ನಡೆಯುತ್ತಿರುವ 40 ಏತ ನೀರಾವರಿ ಯೋಜನೆಗಳು ವಿಳಂಬವಾಗಿರುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. ಜೊತೆಗೆ ಕರ್ತವ್ಯ ನಿಷ್ಟೆ ಇರದ ಅಧಿಕಾರಿಗಳಿಂದಾಗಿ ಇಂತಹ ಲೋಪಗಳಾಗುತ್ತಿದ್ದು, ಇಂತಹ ವ್ಯವಸ್ಥೆ ಮುಂದುವರಿಯದಂತೆ ಎಚ್ಚರ ವಹಿಸುವಂತೆಯೂ ಸಿಎಂ ಸೂಚಿಸಿದರು.
ಹಾಗೆಯೇ ರಾಜ್ಯದ ಏತ ನೀರಾವರಿ ಯೋಜನೆಗಳನ್ನು ನಿಗದಿತ ಸಮಯದಲ್ಲಿ, ಯಾವುದೇ ವಿಳಂಬನೀತಿಗಳನ್ನು ಅನುಸರಿಸದೆ ಮುಗಿಸಬೇಕು. ಈ ಸಂಬಂಧ ವಸ್ತುನಿಷ್ಠ ವರದಿಯನ್ನು ಸಹ ಸರ್ಕಾರಕ್ಕೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಜೊತೆಗೆ ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ಎಚ್ಚರಿಕೆಯಿಂದ ಕೆಲಸ ಮಅಡಬೇಕು ಎಂಬುದಾಗಿಯೂ ಸಿಎಂ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.