ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡುವುದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಕಾರ್ಯ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೆಚ್ಚುಗೆ ಸೂಚಿಸಿ, ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಧ್ವಜ ದಿನಾಚರಣೆಯ ಹಿನ್ನೆಲೆಯಲ್ಲಿ ಕೋರಮಂಗಲದ ಕೆ ಎಸ್ಆರ್ ಪಿ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ, ಕಾರ್ಯಕ್ರಮದಲ್ಲಿ ಭಾಗವಹಿಸಿ, ಪೊಲೀಸ್ ಪದಕ ವಿಜೇತ ಪೊಲೀಸರಿಗೆ ಪದಕ ವಿತರಣೆ ಮಾಡಿ ಅವರು ಮಾತನಾಡಿದರು.
ಪೊಲೀಸರು ಹಬ್ಬ ಹರಿದಿನಗಳು, ವಿಷಮ ಪರಿಸ್ಥಿತಿಗಳಲ್ಲಿಯೂ ಅವಿರತವಾಗಿ ಶ್ರಮ ಪಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಶಾಂತಿ – ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ. ನಡೆದ ಅಹಿತಕರ ಘಟನೆಗಳನ್ನು ಸಹ ಯಶಸ್ವಿಯಾಗಿ ಹತ್ತಿಕ್ಕುವಲ್ಲಿ ರಾಜ್ಯದ ಪೊಲೀಸರು ಯಶಸ್ಸು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸ್ ಇಲಾಖೆಯನ್ನು ಶ್ಲಾಘಿಸುವುದಅಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.