ಚೆನ್ನೈ; ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ಈ ನಡುವೆಯೇ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಅಳಿಯ ಸಬರೀಸನ್ ಅವರಿಗೆ ಸಂಬಂಧಿಸಿದ ಜಾಗಗಳ ಮೇಲೆ ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆ ಅಧಿಕಾರಿಗಳು ಸ್ಟಾಲಿನ್ರ ಅಳಿಯನಿಗೆ ಸಂಬಂಧಿಸಿದ ನಿವಾಸಗಳು ಮತ್ತು ಇತರ ಆವರಣಗಳಲ್ಲಿ ಶೋಧ ನಡೆಸಿದ್ದಾರೆ. ಮೂಲಗಳ ಪ್ರಕಾರ, ಸಬರೀಸನ್ಗೆ ಸಂಪರ್ಕ ಹೊಂದಿದ ನಾಲ್ಕು ಸ್ಥಳಗಳಲ್ಲಿ ಹುಡುಕಾಟಗಳು ನಡೆಯುತ್ತಿವೆ.
ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆಗೆ ತಮಿಳುನಾಡು ಸಜ್ಜಾಗುತ್ತಿರುವ ಸಂದರ್ಭದಲ್ಲಿ ಈ ಐಟಿ ದಾಳಿಗಳು ನಡೆದಿವೆ. ಇದಕ್ಕೂ ಮುನ್ನ ಮಾರ್ಚ್ನಲ್ಲಿ ಡಿಎಂಕೆ ಮತ್ತು ಎಂಡಿಎಂಕೆ ನಾಯಕರ ಕಚೇರಿಗಳು ಮತ್ತು ನಿವಾಸಗಳಲ್ಲಿ ಐಟಿ ಶೋಧ ನಡೆಸಲಾಯಿತು. ವರದಿಗಳ ಪ್ರಕಾರ, ಡಿಎಂಕೆ ಕೆಎಸ್ ಧನಶೇಕರ್ ಮತ್ತು ಎಂಡಿಎಂಕೆಯ ಕವಿನ್ ನಾಗರಾಜ್ ಅವರ ಸ್ಥಳಗಳಲ್ಲಿ ಹುಡುಕಾಟ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Tamil Nadu: Income Tax department search underway at the premises of Sabareesan, son-in-law of DMK president MK Stalin. Apart from his residence, several other places connected to him are also being searched. Details awaited.
— ANI (@ANI) April 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.