ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಹೊಸ ಮಾಗಸೂಚಿಯನ್ನು ಹೊರಡಿಸಿದೆ.
ಕಲೇದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಏರಿಕೆ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಎಮರ್ಜೆನ್ಸಿ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನಾ ಕಠಿಣ ನಿಯಮಗಳನ್ನು ಪಾಲಿಸಲೇ ಬೇಕಾದ ಅನಿವಾರ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಜ್ಞರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೂತನ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ರಾಜ್ಯದಲ್ಲಿ ಯಾವುದೇ ಲಾಕ್ಡೌನ್ ಅಥವಾ ನೈಟ್ ಕರ್ಫ್ಯೂ ಇಲ್ಲ. ಆದರೆ ಕಠಿಣ ನಿಯಮಗಳನ್ನು ಹೇರುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸೂಚಿಸಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗಾಗಿ 20% ಗಳಷ್ಟು ಹಾಸಿಗೆ ವ್ಯವಸ್ಥೆಯನ್ನು ಮೀಸಲಿಡುವಂತೆ ಸರ್ಕಾರ ಸೂಚಿಸಿದೆ.
ರಾಜ್ಯದಲ್ಲಿ 6 – 9 ನೇ ತರಗತಿಯ ವರೆಗೆ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಜಿಮ್, ಸ್ವಿಮಿಂಗ್ ಪೂಲ್ಗಳನ್ನು ಬಳಕೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆ. ಅಪಾರ್ಟ್ಮೆಂಟ್ಗಳಿಗೆ ಸಂಬಂಧಿಸಿದಂತೆ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ 50% ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ದೇಗುಲಗಳಲ್ಲಿ ಜನರು ಗುಂಪುಗೂಡುವಂತಿಲ್ಲ, ಧಾರ್ಮಿಕ ಆಚರಣೆಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಪಾರ್ಟಿ ಹಾಲ್, ಕ್ಲಬ್ ಹೌಸ್ಗಳಿಗೂ ನಿರ್ಬಂಧ ಹೇರಲಾಗಿದೆ. ರ್ಯಾಲಿ, ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಸರ್ಕಾರ ನೂತನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಎಪ್ರಿಲ್ 20 ರ ವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಸರ್ಕಾರ ಸೂಚಿಸಿದೆ. ಮಾಲ್ಗಳಲ್ಲಿ ಮಾರ್ಗಸೂಚಿ ಕಡ್ಡಾಯ ಎಂದು ತಿಳಿಸಿದೆ. ಬಸ್ ಪ್ರಯಾಣಕ್ಕೂ ನಿರ್ಬಂಧ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಕೊರೋನಾ ಹೆಚ್ಚಗಿರುವ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲ್ಬುರ್ಗಿ, ಧಾರವಾಡ, ಬೀದರ್, ಮೈಸೂರು ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಕೊರೋನಾ ಸಂಬಂಧ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಜೊತೆಗೆ ಚರ್ಚಿಸಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಅವರು ಇಂದು ಬೆಳಗ್ಗೆ ತಿಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.