ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಲಾಗುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಮಾರ್ಗಸೂಚಿಗಳನ್ನು ಬದಲಾವಣೆ ಮಾಡುವಂತೆ ಹಲವರು ಸರ್ಕಾರದ ಮುಂದೆ ಮನವಿ ಇಡುತ್ತಿದ್ದಾರೆ. ಆದರೆ ಕೊರೋನಾ ನಿಯಂತ್ರಣಕ್ಕಾಗಿ ಈ ಎಲ್ಲಾ ಕ್ರಮಗಳ ಅವಶ್ಯಕತೆ ಇದ್ದು, ಅವುಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ತರುವುದು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದ್ಯ ರಾಜ್ಯ ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಏಕಾಏಕಿಯಾಗಿ ಜಾರಿಗೊಳಿಸಿರುವುದಲ್ಲ. ಬದಲಾಗಿ ಅವುಗಳ ಬಗ್ಗೆ ಚಿಂತನೆ ನಡೆಸಿ ಬಳಿಕವೇ ಈ ಎಲ್ಲಾ ಕಠಿಣ ನಿರ್ಧಾರಗಳನ್ನು ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ಉದ್ದೇಶಪೂರ್ವಕವಾಗಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಬದಲಾಗಿ ಈ ಬಗ್ಗೆ ಆಳವಾಗಿ ಚಿಂತಿಸಿ ಬಳಿಕವೇ ನಿಯಮಗಳನ್ನು ರೂಪಿಸಿರುವುದಾಗಿ ಅವರು ಹೇಳಿದ್ದಾರೆ.
ಎ.20 ರ ವರೆಗೆ ಈ ನೂತನ ಮಾರ್ಗಸೂಚಿಗಳು ಜಾರಿಯಲ್ಲಿರಲಿವೆ. ಸರ್ಕಾರಕ್ಕೆ ಉದ್ದೇಶಪೂರ್ವಕವಾಗಿ ಯಾವುದೇ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಕಾರ್ಯ ಮಾಡಿಲ್ಲ. ಪರಿಸ್ಥಿತಿ ಮತ್ತು ಅನಿವಅರ್ಯತೆಗೆ ಅನುಗುಣವಾಗಿ ಈ ಕಠಿಣ ನಿಯಮಗಳನ್ನು ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸುತ್ತಿದೆ. ಇಂತಹ ಸಂದರ್ಭದಲ್ಲಿ ಇದರಿಂದ ಪಾರಾಗಲು ಕೊರೋನಾ ನಿಯಮಗಳನ್ನು ಅಳವಡಿಸಿಕೊಳ್ಳುವುದ ಹೆಚ್ಚು ಸೂಕ್ತ ಎಂಬುದಾಗಿಯೂ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.