ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಷ್ಟೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ರಾಜ್ಯ ಸರ್ಕಾರ ಟಫ್ ರೂಲ್ಸ್ ಹೊರಡಿಸಿದೆ. ನೂತನ ಮಾರ್ಗಸೂಚಿಯಲ್ಲಿ ಎಲ್ಲಾ ವಲಯಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ. ಕೊರೋನಾ ತಾಂತ್ರಿಕ ಸಮಿತಿಯ ತಜ್ಞರ ಸೂಚನೆಯಂತೆಯೇ ಈ ಮಾರ್ಗಸೂಚಿಯನ್ನು ರಚಿಸಿ, ಜಾರಿಗೊಳಿಸಲಾಗಿತ್ತು.
ಈ ಮಾರ್ಗಸೂಚಿಯಲ್ಲಿ ಕನ್ನಡ ಚಿತ್ರಮಂದರಗಳಲ್ಲಿ 50% ಆಸನಗಳ ಭರ್ತಿಗೆ ಅವಕಾಶ ಸೇರಿದಂತೆ ಇನ್ನೂ ಹಲವಾರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿತ್ತು. ಆದರೆ ಈ ನಿಯಮವನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಮನವಿಗಳು ಬಂದಿದ್ದು, ಇದನ್ನು ಬದಲಾಯಿಸುವ ಹಕ್ಕು ರಾಜ್ಯ ಆರೋಗ್ಯ ಇಲಾಖೆಗೆ ಇಲ್ಲ. ಬದಲಾಗಿ ರಾಜ್ಯ ಸರ್ಕಾರ ಮಾತ್ರವೇ ಆದೇಶಗಳನ್ನು ಬದಲಾವಣೆ ಮಾಡುವ ಹಕ್ಕು ಹೊಂದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಮಾರ್ಗಸೂಚಿಗಳನ್ನು ಬದಲಾವಣೆ ಮಾಡುವ ಹಕ್ಕು ಸರ್ಕಾರಕ್ಕೆ ಅಥವಾ ಆರೋಗ್ಯ ಇಲಾಖೆಗೆ ಇಲ್ಲ. ವೈದ್ಯಕೀಯ ಕ್ಷೇತ್ರದಲ್ಲಿನ ತಜ್ಞರು ಇರುವ ಕೊರೋನಾ ನಿಯಂತ್ರಣ ಸಮಿತಿಯ ಸೂಚನೆಯಂತೆಯೇ, ಜನರ ಆರೋಗ್ಯದ ದೃಷ್ಟಿಯಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ ಎಂಬುದಾಗಿಯೂ ಸರ್ಕಾರದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.