ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 20% ಹಾಸಿಗೆಗಳನ್ನು ಮೀಸಲಿಡುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಪರ ಸಚಿವ ಡಾ ಕೆ ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊರೋನಾ ಅಲೆ ಹೆಚ್ಚಾಗುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಖಾಲಿ ಇಲ್ಲದೇ ಇದ್ದು, ಇದರಿಂದಾಗಿ ಸೋಂಕಿತರು ಚಿಕಿತ್ಸೆ ಪಡೆಯುವುದಕ್ಕೆ ಪರದಾಟ ನಡೆಸಬೇಕಾದ ಪರಿಸ್ಥಿತಿ ಬಂದೊದಗಿದೆ. ಇನ್ನು ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಹಾಸಿಗೆ ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆಗೆ ಮಾತುಕತೆ ನಡೆಸುವುದಕ್ಕೂ ಸರ್ಕಾರ ಮುಂದಾಗಿದೆ ಎಂದು ಮೂಲಗಳು ಹೇಳಿವೆ.
ಕೊರೋನಾ ಸೋಂಕು ರಾಜ್ಯವನ್ನು ಮತ್ತೆ ತತ್ತರಿಸುವಂತೆ ನೀಡಿದೆ. ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಅನೇಕ ಉಪಕ್ರಮಗಳನ್ನು ಸಹ ಸರ್ಕಾರ ಕೈಗೊಳ್ಳುತ್ತಿದೆ. ಜೊತೆಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅನೇಕ ನಿಯಂತ್ರಣ ನಿಯಮಗಳನ್ನು ಸಹ ರೂಪಿಸಿದೆ. ಹಾಗೆಯೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ಸಮರ್ಪಕವಾಗಿ ಅನುಸರಣೆ ಮಾಡುವಂತೆಯೂ ಸರ್ಕಾರ ಕಿವಿಮಾತು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.