ಶ್ರೀನಗರ: ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು & ಕಾಶ್ಮೀರ್ (ISJK) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಭಾನುವಾರ ಜಮ್ಮು-ಕಾಶ್ಮೀರದ ಕೋಟ್ಲಿ ಜಜ್ಜರ್ ಪ್ರದೇಶದಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ.
ಸ್ಪೆಷಲ ಆಪರೇಶನ್ಸ್ ಗ್ರೂಪ್ (SOG) ಮತ್ತು ಜಮ್ಮು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿ ಈತನನ್ನು ಬಂಧನಕ್ಕೆ ಒಳಪಡಿಸಿದ್ದಾರೆ.
ಈ ಉಗ್ರನಿಂದ ಪೊಲೀಸರು ಒಂದು ಪಿಸ್ತೂಲ್, 8 ಗುಂಡುಗಳು ಮತ್ತು 1.1 ಲಕ್ಷ ರೂಪಾಯಿಗಳ ನಗದನ್ನು ವಶಪಡಿಸಿಕೊಂಡಿದ್ದಾರೆ.
ಭಾನುವಾರ ಸಂಜೆ 7 ಗಂಟೆಗೆ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಈತನ ವಿರುದ್ಧ ಇದೀಗ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.