ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಹಿನ್ನೆಲೆ ಕೊರೋನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಅನುಸರಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ತೆಗೆದುಕೊಳ್ಳುವುದಕ್ಕೆ ಕೊರೋನಾ ತಾಂತ್ರಿಕ ಸಮಿತಿ ರೂಪಿಸಿರುವ ಶಿಫಾರಸ್ಸುಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೂ ಕಳುಹಿಸಿಕೊಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸೂಚಿಸಿರುವ ಸಲಹೆಗಳನ್ನು ಆಧರಿಸಿ ರಾಜ್ಯದಲ್ಲಿ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿರುವುದಾಗಿಯೂ ಅವರು ಹೇಳಿದ್ದಾರೆ.
ಯಾರನ್ನೋ ಮೆಚ್ಚಿಸುವ ಸಲುವಾಗಿ ನಿರ್ಧಾರಗಳನ್ನು ಬದಲಿಸಲಾಗದು. ಸರ್ಕಾರಕ್ಕೆ ಜನರ ಯೋಗಕ್ಷೇಮ, ಆರೋಗ್ಯ ಕಾಪಾಡುವುದು ಮುಖ್ಯ. ಈ ಹಿನ್ನೆಯಲ್ಲಿ ಟೀಕಿಸುವವರಿಗೆ ಅಂಜದೆ ಕಠಿಣ ನಿರ್ಧಾರಗಳನ್ನು ಮುಂದುವರಿಸಲಾಗುವುದು. ರಾಜ್ಯದಲ್ಲಿ ಜನರ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಠಿಣ ಕ್ರಮಗಳನ್ನು ಸಹ ಜಾರಿಗೆ ತರಲಾಗಿದೆ ಎಂದು ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.