ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರಾಜ್ಯದ ರೈತರಿಗೆ ಮುಂಗಾರು ಬಿತ್ತನೆಗೆ ಅಗತ್ಯವಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಪೂರಕ ಕ್ರಮಗಳನ್ನು ಕೃಷಿ ಇಲಾಖೆ ಕೈಗೊಂಡಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಫಲಾನುಭವಿ ರೈತರಿಗೆ ವಿತರಣೆ ಮಾಡುವ ರಸಗೊಬ್ಬರ, ಬೀಜ ಪೂರೈಕೆಗೆ ಸರ್ಕಾರದ ವತಿಯಿಂದ 400 ಕೋಟಿ ರೂ. ಮುಂಗಡ ಹಣ ಬಿಡುಗಡೆ ಮಾಡುವಂತೆಯೂ ಕೋರಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದಿಂದಲೂ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಮಾರ್ಕೆಟಿಂಗ್ ಫೆಡರೇಶನ್ಗೆ 250 ಕೋಟಿ ರೂ., ಕರ್ನಾಟಕ ಬೀಜ ಅಭಿವೃದ್ಧಿ ನಿಗಮಕ್ಕೆ 150 ಕೋಟಿ ರೂ. ಗಳನ್ನು ವಿತರಣೆ ಮಾಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.