ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ 15 ಲಕ್ಷಕ್ಕಿಂತ ಅಧಿಕ ಕೋವಿಡ್ ಲಸಿಕೆ ಕಳುಹಿಸಿದೆ. ಇದರಲ್ಲಿ 10 ಲಕ್ಷಗಳಷ್ಟು ಬೆಂಗಳೂರು ಮತ್ತು 5 ಲಕ್ಷ ಲಸಿಕೆಗಳನ್ನು ಬೆಳಗಾವಿಗೆ ರವಾನೆ ಮಾಡಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಭಾನುವಾರ 8 ರಾಜ್ಯಗಳ ಜೊತೆಗೆ ಪ್ರಧಾನಮಂತ್ರಿ ಮೋದಿ ಅವರು ಸಮಾಲೋಚನೆ ನಡೆಸಿದ್ದಾರೆ. ಆಯಾ ರಾಜ್ಯಗಳ ಕೊರೋನಾ ನಿರ್ವಹಣಾ ಜವಾಬ್ದಾರಿಯನ್ನು ಅದೇ ರಾಜ್ಯಕ್ಕೆ ನೀಡಲಾಗಿದೆ. ಸೋಂಕು ಹೆಚ್ಚದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುವ ಭರವಸೆ ಇದೆ. ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರವೂ ಅತೀ ಮುಖ್ಯ. ಮೇ ಅಂತ್ಯದವರೆಗೂ ಸೋಂಕು ಹೆಚ್ಚಗುವ ಸಾಧ್ಯತೆಯ ಬಗ್ಗೆ ತಜ್ಞರು ತಿಳಿಸಿದ್ದು ಈ ಹಿನ್ನೆಲೆಯಲ್ಲಿ ಎಚ್ಚರ ವಹಿಸುವುದು ಸೂಕ್ತ ಎಂದು ಅವರು ಹೇಳಿದ್ದಾರೆ. ಕೊರೋನಾ ಹೆಚ್ಚಾದಲ್ಲಿ ರಾಜ್ಯದಲ್ಲಿ ಒಂದೊಂದೇ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಬೇಕಾಗುತ್ತದೆ ಎಂಬುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.