ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6-9 ನೇ ತರಗತಿಗಳನ್ನು ಎ. 20 ರ ವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ತರಗತಿಗಳನ್ನು ನಡೆಸುವುದು, ಪರೀಕ್ಷೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, 1 – 9 ನೇ ತರಗತಿಗಳ ವರೆಗಿನ ಪರೀಕ್ಷೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಪರೀಕ್ಷೆಯ ಮೌಲ್ಯಾಂಕನದ ಬಗ್ಗೆಯೂ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ಸದ್ಯಕ್ಕೆ ಯಾವುದೇ ರೀತಿಯ ಅಂತಿಮ ನಿರ್ಣಯಗಳನ್ನು ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿದ್ದಾರೆ.
ಕಲಿಕೆಯ ಮೌಲ್ಯಾಂಕನ ನಡೆಸಬೇಕು ಎಂಬ ಅಭಿಪ್ರಾಯ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಪಡೆಯುವುದಕ್ಕಾಗಿ ಈ ಸಭೆ ನಡೆಸಿರುವುದಾಗಿ ಸಚಿವರು ತಿಳಿಸಿದ್ದಾರೆ. ಮಕ್ಕಳ ಪರೀಕ್ಷೆಗೆ ಸಂಬಂಧಿಸಿದಂತೆಯೂ ಇನ್ನೆರಡು ದಿನಗಳಲ್ಲಿ ಭವಿಷ್ಯ ನಿರ್ಧಾರವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.