ನವದೆಹಲಿ: ಒಪ್ಪಂದದ ಪ್ರಕಾರ ಭಾರತವು ಅಮೆರಿಕದಿಂದ ಎಂಎಚ್ -60 ಹೆಲಿಕಾಫ್ಟರ್ ಅನ್ನು ಖರೀದಿಸಿದ್ದು, ಇದರ ನಿರ್ವಹಣೆ ಕುರಿತು ಅಮೆರಿಕಾದ ಪೈಲಟ್ಗಳು ಈ ವರ್ಷದ ಮೇ ಮತ್ತು ಜೂನ್ನಲ್ಲಿ ಭಾರತೀಯ ನೌಕಾಪಡೆಯ ಪೈಲಟ್ಗಳಿಗೆ ತರಬೇತಿ ನೀಡಲಿದ್ದಾರೆ.
ಈ ಒಪ್ಪಂದವು 2020 ರಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಆಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವೆ ನಡೆದಿತ್ತು. ಆಗಿನ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಂದರ್ಭ ಈ ಹೆಲಿಕಾಫ್ಟರ್ ಖರೀದಿಯ ಪ್ರಕ್ರಿಯೆಗೆ ಅನುಗುಣವಾಗಿ ಒಟ್ಟು 2.13 ಬಿಲಿಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.
ಈ ಒಪ್ಪಂದ ಭಾಗವಾಗಿ 3 ಹೆಲಿಕಾಫ್ಟರ್ಗಳು ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ವರದಿ ತಿಳಿಸಿದೆ. ಜೊತೆಗೆ ಉಳಿದ ಎಲ್ಲಾ ಹೆಲಿಕಾಫ್ಟರ್ಗಳು 2023 ರ ಅಂತ್ಯದ ವೇಳೆಗೆ ಭಾರತಕ್ಕೆ ತಲುಪುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಜಲಾಂತರ್ಗಾಮಿ ವಿರೋಧಿ ಯುದ್ಧ ಹೆಲಿಕಾಫ್ಟರ್ಗಳ ಕೊರತೆ ಎದ್ದು ಕಾಣುತ್ತಿದ್ದರಿಂದ ಮತ್ತು ಸಾಗರ ವಲಯದಲ್ಲಿ ಮತ್ತಷ್ಟು ಸಧೃಡತೆಯನ್ನು ಪ್ರದರ್ಶಿಸಲು ಈ ಒಪ್ಪಂದ ಸಹಕಾರಿಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.