ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅನುಮೋದನೆ ಪಡೆಯಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದ ಹಲವು ಮಂದಿ ಶಿಕ್ಷಕರು ವರ್ಗಾವಣೆಯ ನಿರೀಕ್ಷೆಯಲ್ಲಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಚಿಂತನೆ ನಡೆಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವರ್ಗಾವಣೆ ಸಂಬಂಧ ಶಿಕ್ಷಕರಿಗೆ ಭರವಸೆ ನೀಡಲಾಗಿತ್ತು. ಇದನ್ನು ಪೂರೈಕೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆಯೇ ವರ್ಗಾವಣೆ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ಸರ್ಕಾರ ಸಿದ್ಧತೆ ನಡೆಸಿತ್ತು. ಈ ಸಂದರ್ಭದಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿ ಶಿಕ್ಷಕರೊಬ್ಬರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ ತಡೆ ತಂದಿದ್ದರು. 2016-17 ರ ಅವಧಿಯಲ್ಲಿ ಹೆಚ್ಚುವರಿ ಶಿಕ್ಷಕರೆಂದು ಹಲವು ಶಿಕ್ಷಕರನ್ನು ಗುರುತಿಸಿ ವರ್ಗಾವಣೆ ಪ್ರಕ್ರಿಯೆ ನಡೆಸಲಾಗಿತ್ತು. ಇಂತಹ ಕಷ್ಟಗಳಿಗೆ ತುತ್ತಾದ ಶಿಕ್ಷರು ತಮ್ಮನ್ನು ಬಿಟ್ಟು, 2019-20 ರಲ್ಲಿ ವರ್ಗಾವಣೆಗೊಂಡ ಶಿಕ್ಷಕರನ್ನು ಕೌನ್ಸಲಿಂಗ್ ಪ್ರಕ್ರಿಯೆಗೆ ಒಳಪಡಿಸಿ ವರ್ಗ ಮಾಡುವುದರ ವಿರುದ್ಧ ಕೆಎಟಿ ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುವ ಮೂಲಕ ವರ್ಗಾವಣಾ ಪ್ರಕ್ರಿಯೆಗೆ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.