ಬೆಂಗಳೂರು: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಮತ್ತು 1–9 ನೇ ತರಗತಿ ವರೆಗಿನ ತರಗತಿಗಳು ಸ್ಥಗಿತವಾದ ಬೆನ್ನಲ್ಲೇ , ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಣ ನೀಡುವಂತೆ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚನೆ ನೀಡಿದೆ.
ಆ ಮೂಲಕ ವಿನೂತನ ರೀತಿಯಲ್ಲಿ ವಿದ್ಯಾಗಮ ಯೋಜನೆಯ ಮರು ಅನುಷ್ಠಾನಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿಗೆ ಸಂಬಧಿಸಿದ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಕ್ಲಸ್ಟರ್ ಗಳ ಸಿಆರ್ಪಿ ಗಳಿಗೆ ಈ ಸಂಬಂದ ಜ್ಞಾನ ಪತ್ರವನ್ನು ಕಳುಹಿಸಿದ್ದಾರೆ. ಎ. 28 ರ ವರೆಗೆ 6 – 9 ನೇ ತರಗತಿ ವಿದ್ಯಾರ್ಥಿಗಳಿಗೆ ನೇರ ತರಗತಿಗಳನ್ನು ಸ್ಥಗಿತ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮನೆಗೆ ತೆರಳಿ ಶಿಕ್ಷಣ ನೀಡುವಂತೆ ಈ ಪತ್ರದಲ್ಲಿ ಸೂಚಿಸಲಾಗಿದೆ.
ತರಗತಿಗಳು ಮತ್ತೆ ಆರಂಭವಾಗುವ ವರೆಗೆ ವಿದ್ಯಾರ್ಥಿಗಳ ಜೊತೆಗೆ ನಿಕಟ ಸಂಪರ್ಕದಲ್ಲಿರಬೇಕು ಎಂಬುದಾಗಿಯೂ ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳು ಕಲಿಕೆಯನ್ನು ಮುಂದುವರಿಸುವುದಕ್ಕೆ ಅಗತ್ಯವಾದ ಪ್ರೇರೇಪಣೆ ನೀಡುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.