ಕಲ್ಬುರ್ಗಿ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿ ಜಲಾಶಯದ ಸಮೀಪ ʼಜಂಗಲ್ ಲಾಡ್ಜಸ್ ಆಂಡ್ ರೆಸಾರ್ಟ್ಸ್ ನಿರ್ಮಾಣ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಟೆಂಡರ್ ಪ್ರಕ್ರಿಯೆಯನ್ನು ಸಹ ಆರಂಭ ಮಾಡಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಚಂದ್ರಂಪಳ್ಳಿ ಹಾಗೂ ಆಳಂದ ತಾಲ್ಲೂಕಿನ ಅಮರ್ಜಾ ಸಮೀಪ ಈ ಜಿಎಲ್ಆರ್ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಪರಿಣಿತರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಅಲ್ಲದೆ ಕಂಪನಿಗಳ ಜಲಾಶಯಗಳ ಭಾಗದಲ್ಲಿ ಹೂಡಿಕೆಗೆ ಆಕರ್ಷಿಸುವ ನಿಟ್ಟಿನಲ್ಲಿಯೂ ಪ್ರಯತ್ನಗಳನ್ನು ನಡೆಸಲಾಗುವುದು. ಪ್ರವಾಸೋಧ್ಯಮ ಇಲಾಖೆ ಹೂಡಿಕೆಗೆ ಅವಕಾಶಗಳನ್ನು ಕಲ್ಪಿಸಬಲ್ಲ ಜಲಾಶಯಗಳನ್ನು ಗುರತಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಹೊಟೇಲ್ಗಳಿಗೆ ಜನರು ಭೇಟಿ ನೀಡಬೇಕು ಎಂದಾದಲ್ಲಿ ಅದು ಸಂಪೂರ್ಣ ಸೌಕರ್ಯಗಳನ್ನು ಒಳಗೊಂಡಿರಬೇಕು. ಹೊಟೇಲ್ಗಳನ್ನು ಆರಂಭಿಸಲು ಬಯಸುವವರಿಗೆ ಸರ್ಕಾರ 15 % ಗಳಷ್ಟು ಆರ್ಥಿಕ ನೆರವನ್ನು ಪ್ರವಾಸೋದ್ಯಮ ಇಲಾಖೆಯ ಮೂಲಕ ಒದಗಿಸಲಾಗುತ್ತದೆ. ಈ ನೆರವನ್ನು 25 % ಗಳಿಗೆ ಏರಿಕೆ ಮಾಡುವ ನಿಟ್ಟಿನಲ್ಲಿಯೂ ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.