ನವದೆಹಲಿ: ನಮ್ಮ ಭೂಮಿಯನ್ನು ಆರೋಗ್ಯವಾಗಿಡಲು ಹಗಲು ರಾತ್ರಿ ಕೆಲಸ ಮಾಡುವ ಎಲ್ಲರಿಗೂ ನಮ್ಮ ಕೃತಜ್ಞತೆ ಮತ್ತು ಮೆಚ್ಚುಗೆಯನ್ನು ಪುನರುಚ್ಚರಿಸುವ ದಿನ ವಿಶ್ವ ಆರೋಗ್ಯ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಶ್ವ ಆರೋಗ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಆರೋಗ್ಯ ರಕ್ಷಣೆಯಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಬೆಂಬಲಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನವೂ ಇದಾಗಿದೆ ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ದಿನದಂದು, ಮುಖಗವಸು ಧರಿಸುವುದು, ನಿಯಮಿತವಾಗಿ ಕೈ ತೊಳೆಯುವುದು ಮತ್ತು ಇತರ ಪ್ರೋಟೋಕಾಲ್ಗಳನ್ನು ಅನುಸರಿಸುವುದು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಕೋವಿಡ್-19 ವಿರುದ್ಧ ಹೋರಾಡುವತ್ತ ಗಮನ ಹರಿಸಬೇಕೆಂದು ಅವರು ಎಲ್ಲರಿಗೂ ಕರೆ ನೀಡಿದ್ದಾರೆ.
ಇದೇ ಸಮಯದಲ್ಲಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸದೃಢವಾಗಿರಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮೋದಿ ಹೇಳಿದ್ದಾರೆ.
ಉನ್ನತ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆಗೆ ಜನರ ಪ್ರವೇಶವನ್ನು ಖಾತ್ರಿಪಡಿಸಿಕೊಳ್ಳಲು ಭಾರತ ಸರ್ಕಾರ ಆಯುಷ್ಮಾನ್ ಭಾರತ್ ಮತ್ತು ಪ್ರಧಾನ್ ಮಂತ್ರಿ ಜನೌಷಧಿ ಯೋಜನೆ ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ಹೇಳಿದ್ದರೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸಲು ಭಾರತವು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ ಅನ್ನು ನಡೆಸುತ್ತಿದೆ ಎಂದಿದ್ದಾರೆ.
#WorldHealthDay is a day to reaffirm our gratitude and appreciation to all those who work day and night to keep our planet healthy. It’s also a day to reiterate our commitment to supporting research and innovation in healthcare.
— Narendra Modi (@narendramodi) April 7, 2021
On #WorldHealthDay, let us keep the focus on fighting COVID-19 by taking all possible precautions including wearing a mask, regularly washing hands and following the other protocols.
At the same time, do take all possible steps to boost immunity and stay fit.
— Narendra Modi (@narendramodi) April 7, 2021
The Government of India is taking numerous measures including Ayushman Bharat and PM Janaushadhi Yojana to ensure people get access to top quality and affordable healthcare. India is also conducting the world’s largest vaccination drive to strengthen the fight against COVID-19.
— Narendra Modi (@narendramodi) April 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.