ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಕೇಂದ್ರ ಸರ್ಕಾರ ನೌಕರರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.
ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಈ ಕುರಿತು ಇಂದು ಆದೇಶ ಹೊರಡಿಸಿದೆ. ಆಗಾಗ್ಗೆ ಕೈ ತೊಳೆಯುವುದು, ಮುಖಗವಸು ಅಥವಾ ಮುಖದ ಹೊದಿಕೆಯನ್ನು ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವ ಮೂಲಕ ಲಸಿಕೆ ಹಾಕಿಸಿಕೊಂಡ ನಂತರವೂ ಕೋವಿಡ್ ಸೂಕ್ತವಾದ ನಡವಳಿಕೆಯನ್ನು ಅನುಸರಿಸಬೇಕು ಎಂದು ಸೂಚಿಸಲಾಗಿದೆ.
ಸರ್ಕಾರವು ಪರಿಸ್ಥಿತಿಯನ್ನು ಬಹಳ ನಿಕಟವಾಗಿ ಗಮನಿಸುತ್ತಿದೆ ಮತ್ತು ಕೋವಿಡ್-19 ಸಾಂಕ್ರಾಮಿಕ ಹರಡುವಿಕೆಯನ್ನು ನಿಯಂತ್ರಿಸಲು ಆದ್ಯತೆಯ ಗುಂಪುಗಳಿಗೆ ಲಸಿಕೆನೀಡುವ ತಂತ್ರದ ಆಧಾರದ ಮೇಲೆ, ಸದ್ಯ 45 ವರ್ಷ ಮತ್ತು ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ.
ಕೋವಿಡ್-19 ನಿಯಂತ್ರಣ ಕ್ರಮಗಳ ಬಗ್ಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಕಾಲಕಾಲಕ್ಕೆ ಸೂಚನೆಗಳನ್ನು ನೀಡುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.