ನವದೆಹಲಿ: ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪ್ರಧಾನ ಮಂತ್ರಿಗಳ ಸಂವಹನ ಕಾರ್ಯಕ್ರಮದ ನಾಲ್ಕನೇ ಆವೃತ್ತಿಯ ʼಪರೀಕ್ಷಾ ಪೆ ಚಾರ್ಚಾʼ ಇಂದು ಸಂಜೆ 7 ಗಂಟೆಗೆ ನಡೆಯುತ್ತಿದೆ.
ಈ ಬಾರಿ ಕಾರ್ಯಕ್ರಮವು ವರ್ಚುವಲ್ ಆಗಿ ನಡೆಯಲಿದೆ ಎಂದು. ಮೈಗೌವ್ ಪ್ಲಾಟ್ಫಾರ್ಮ್ನಲ್ಲಿ ಆಯೋಜಿಸಲಾದ ಆನ್ಲೈನ್ ಸ್ಪರ್ಧೆಯ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಪರೀಕ್ಷಾ ಯೋಧರು, ಪೋಷಕರು ಮತ್ತು ಶಿಕ್ಷಕರೊಂದಿಗೆ ಹೊಸ ಸ್ವರೂಪದಲ್ಲಿ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಹಲವಾರು ಆಸಕ್ತಿದಾಯಕ ಪ್ರಶ್ನೆಗಳ ಮೂಲಕ ಸ್ಮರಣೀಯ ಚರ್ಚೆಯನ್ನು ನಡೆಸಲಾಗುತ್ತದೆ ಎಂದು ಟ್ವೀಟ್ನಲ್ಲಿ ತಿಳಿಸಲಾಗಿದೆ.
9 ರಿಂದ 12 ನೇ ತರಗತಿಯಲ್ಲಿ ಕಲಿಯುವ ಮಕ್ಕಳು, ಶಿಕ್ಷಕರು ಮತ್ತು ಪೋಷಕರಿಗೆ ಈ ವರ್ಷದ ಫೆಬ್ರವರಿ 17 ರಿಂದ ಮಾರ್ಚ್ 14 ರವರೆಗೆ ವಿವಿಧ ವಿಷಯಗಳ ಕುರಿತು ಮೈಗೌವ್ ಪ್ಲಾಟ್ಫಾರ್ಮ್ನಲ್ಲಿ ಆನ್ಲೈನ್ ಸೃಜನಶೀಲ ಬರವಣಿಗೆ ಸ್ಪರ್ಧೆಯನ್ನು ನಡೆಸಲಾಯಿತು. ಪರೀಕ್ಷಾ ಒತ್ತಡ ನಿವಾರಿಸಲು ಮತ್ತು ಅವರ ಸ್ಥೈರ್ಯವನ್ನು ಹೆಚ್ಚಿಸಲು ಪರಿಕ್ಷ ಪೆ ಚಾರ್ಚಾ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಸೃಜನಶೀಲ ಬರವಣಿಗೆ ಸ್ಪರ್ಧೆಯಲ್ಲಿ 81 ವಿದೇಶಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಇದೇ ಮೊದಲು ಎಂದು ಅವರು ಹೇಳಿದ್ದಾರೆ.
The first ever virtual #PPC2021 is going to be an exciting interaction, covering a diverse range of topics. You could be an #ExamWarrior, a parent or a teacher…there’s something for everyone.
Let us make exams stress free!
Watch tonight at 7 PM. pic.twitter.com/Sdu7dS7DSl
— Narendra Modi (@narendramodi) April 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.