ನವದೆಹಲಿ: ಲಡಾಖ್ ಅನ್ನು ಇಂಗಾಲ-ತಟಸ್ಥ ವಲಯವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ತ್ರಿಪಕ್ಷೀಯ ಒಪ್ಪಂದ ಏರ್ಪಟ್ಟಿದೆ. ಕೇಂದ್ರಾಡಳಿತ ಪ್ರದೇಶದ ಆಡಳಿತ, ಲೆಹ್ ಹಿಲ್ ಕೌನ್ಸಿಲ್ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್ಇಸಿಐ ಲಿಮಿಟೆಡ್) ಲೇಹ್ ಜಿಲ್ಲೆಯ ತಾರೂನಲ್ಲಿ 50 ಮೆಗಾವ್ಯಾಟ್ ಸೌರ ವಿದ್ಯುತ್ ಯೋಜನೆಯನ್ನು ಸ್ಥಾಪಿಸಲು ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ರಾಷ್ಟ್ರದ ಪ್ರಯತ್ನಗಳಿಗೆ ಕೊಡುಗೆ ನೀಡಲು ಲಡಾಖ್ 33GW ನವೀಕರಿಸಬಹುದಾದ ಶಕ್ತಿಯನ್ನು ಉತ್ಪಾದಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಕೇಂದ್ರಾಡಳಿತ ಪ್ರದೇಶದ ಆಡಳಿತ, ಲೆಹ್ ಹಿಲ್ ಕೌನ್ಸಿಲ್ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ 50 ಮೆಗಾವ್ಯಾಟ್ ಸೌರ ಶಕ್ತಿ ಯೋಜನೆ ಆರಂಭಿಸಲು ಮೊದಲ ಒಪ್ಪಂದಕ್ಕೆ ಸಹಿ ಹಾಕಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆರ್.ಕೆ.ಮಾಥುರ್, ವಿವಿಧ ಅವಶ್ಯಕತೆಗಳನ್ನು ಪರಿಗಣಿಸಿ ಮುಂದಿನ ಐದು ವರ್ಷಗಳಲ್ಲಿ ಲಡಾಖ್ ಪ್ರದೇಶದಲ್ಲಿ 200 ಮೆಗಾವ್ಯಾಟ್ ವರೆಗೆ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ ಎಂದಿದ್ದಾರೆ.
ಕಾರ್ಬನ್ ನ್ಯೂಟ್ರಲ್ ಲಡಾಖ್ಗಾಗಿ ಪ್ರಧಾನಿ ಮೋದಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಅನೇಕ ನವೀಕರಿಸಬಹುದಾದ ಇಂಧನ ಯೋಜನೆಗಳ ಅನುಷ್ಠಾನಕ್ಕೆ ಅವರು ಕರೆ ನೀಡಿದ್ದಾರೆ. ಲಡಾಖ್ನಲ್ಲಿ ಹತ್ತು ಸಾವಿರ ಮೆಗಾವ್ಯಾಟ್ ಮೈಲಿಗಲ್ಲು ಯೋಜನೆಯಲ್ಲಿ ಯುಟಿ ಆಡಳಿತವು ಎಸ್ಇಸಿಐ ಜೊತೆ ಕೆಲಸ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ನವೀಕರಿಸಬಹುದಾದ ಸಂಪನ್ಮೂಲಗಳಿಂದ ಉತ್ಪತ್ತಿಯಾಗುವ ಪ್ರತಿ ಮೆಗಾವ್ಯಾಟ್ ವಿದ್ಯುತ್ ಸ್ಥಳೀಯವಾಗಿ ಉದ್ಯೋಗ, ಆರ್ಥಿಕ ಅಭಿವೃದ್ಧಿಗೆ ಮತ್ತು ಜಾಗತಿಕವಾಗಿ ಇಂಗಾಲದ ತಟಸ್ಥತೆಗೆ ಕೊಡುಗೆ ನೀಡುತ್ತದೆ ಎಂದು ಮಾಥುರ್ ಹೇಳಿದ್ದಾರೆ.
ಈ ಯೋಜನೆಯು ವಿದ್ಯುತ್ ವಲಯದಲ್ಲಿ ಲಡಾಖ್ ಅನ್ನು ಆತ್ಮನಿರ್ಭರ ಮಾಡುತ್ತದೆ ಮತ್ತು ಅಂತಿಮ ಬಳಕೆದಾರರಿಗೆ ಅತ್ಯಲ್ಪ ಬೆಲೆಯಲ್ಲಿ ವಿದ್ಯುತ್ ಲಭ್ಯತೆಯನ್ನುಂಟು ಮಾಡುತ್ತದೆ ಎಂದು ಲಡಾಕ್ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.