ಬೆಂಗಳೂರು: ಕೊರೋನಾ ಸಂಕಷ್ಟ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಸಮರ್ಪಕ ಅನುಷ್ಟಾನದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾರ್ಷಲ್ಗಳನ್ನು ನಿಯೋಜಿಸಿದೆ. ಬಿಬಿಯಂಪಿಯ ಮಾರ್ಷಲ್ಗಳಿಗೆ ಇದೀಗ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಸಾಥ್ ನೀಡಿದ್ದು, ಆ ಮೂಲಕ ಕೊರೋನಾ ನಿಯಂತ್ರಣ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ವಹಿಸುತ್ತಿದ್ದಾರೆ.
ಈ ಸಂಬಂಧ ಮಾತನಾಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಕೊರೋನಾ ನಿಯಮಗಳನ್ನು ಉಲ್ಲಂಘನೆ ಮಾಡುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾರ್ಷಲ್ಗಳು,ಪೊಲೀಸರು ಕಾನೂನು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುವ, ಇತರ ಕ್ರಮಗಳನ್ನು ಕೈಗೊಳ್ಳುವ ಕೆಲಸಗಳನ್ನು ಮಾಡುತ್ತಿದ್ದಾರೆ. ಇವರೊಂದಿಗೆ ಸೋಂಕು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ನಾಗರಿಕರಲ್ಲಿ ಎಚ್ಚರಿಕೆ ಮೂಡಿಸುವ ಕೆಲಸವನ್ನು ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ಈಗಾಗಲೇ ಆಶಾ ಕಾರ್ಯಕರ್ತೆಯರು, ಆಸ್ಪತ್ರೆಗಳು ಸಹಕಾರ ನೀಡುವಂತೆಯೂ ಗುಪ್ತಾ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಸಂಬಂಧಿಸಿದಂತೆ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಅಗತ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.