ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಹರಿದ್ವಾರ ಕುಂಭಮೇಳ ಕರೋನವೈರಸ್ ಸೂಪರ್ ಸ್ಪ್ರೆಡರ್ ಆಗಿದೆ ಎಂದು ಕೇಂದ್ರ ಸರಕಾರ ಹೇಳಿದೆ ಎಂಬುದಾಗಿ ಮಾಧ್ಯಮವೊಂದು ಮಂಗಳವಾರ ವರದಿ ಮಾಡಿತ್ತು.
ಆದರೆ ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು, ವರದಿ ಸಂಪೂರ್ಣ ಸುಳ್ಳು ಎಂದು ಹೇಳಿದೆ.
ಇಂಡಿಯಾ ಟುಡೇ ಪ್ರಕಟಿಸಿರುವ ಈ ವರದಿಯ ಸುಳ್ಳಿನ ಬಗ್ಗೆ ಆಕ್ರೋಶಗಳು ವ್ಯಕ್ತವಾಗಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷದ ಕುಂಭಮೇಳದ ಅವಧಿಯನ್ನು ಈಗಾಗಲೇ 3-4 ತಿಂಗಳಿಂದ ಒಂದು ತಿಂಗಳವರೆಗೆ ಮೊಟಕುಗೊಳಿಸಲಾಗಿದೆ. ಕುಂಭಮೇಳದಲ್ಲಿ ಅಳವಡಿಸಿಕೊಳ್ಳಬೇಕಾದ ಅಭ್ಯಾಸಗಳನ್ನು ವಿವರಿಸುವ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್ಒಪಿ) ಕೇಂದ್ರ ಹೊರಡಿಸಿದೆ.
This news published by @IndiaToday is INCORRECT and FAKE.#Unite2FightCorona pic.twitter.com/29J7GgN7mk
— Ministry of Health (@MoHFW_INDIA) April 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.