ಧಾರವಾಡ: ಕಳೆದ ವರ್ಷದ ಕೊರೋನಾ ನಡುವೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಕ್ಕೆ ನಡೆಸಿದ ಸಿದ್ಧತೆಗಳಂತೆಯೇ ಈ ಬಾರಿಯೂ ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಕಳೆದ ಬಾರಿ ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ ರಾಜ್ಯದಲ್ಲಿ ಎಸ್ಎಸ್ಎಲ್, ಪಿಯುಸಿ ಪರೀಕ್ಷೆಗಳನ್ನು ಹೆಚ್ಚು ಯಶಸ್ವಿಯಾಗಿ ಆಯೋಜನೆ ಮಾಡಿತ್ತು. ಅದರಂತೆಯೇ ಈ ಬಾರಿಯೂ ಪರೀಕ್ಷೆ ನಡೆಸುವುದಕ್ಕೆ ಪೂರಕವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಅಡಿಕೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.
ಕಳೆದ ಬಾರಿ ರಾಜ್ಯದಲ್ಲಿ ಪರೀಕ್ಷೆಗಳು ಯಶಸ್ವಿಯಾಗುವುದರ ಹಿಂದೆ ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆಗಳೂ ಕೈ ಜೋಡಿಸಿದ್ದವು. ಈ ಬಾರಿಯೂ ಈ ಎಲ್ಲಾ ಇಲಾಖೆಗಳಿಂದ ಸಹಕಾರ ಪಡೆದುಕೊಂಡು ಪರೀಕ್ಷೆಗಳನ್ನು ನಡೆಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. 1 – 9 ನೇ ತರಗತಿಯ ವರೆಗೆ ಪರೀಕ್ಷೆ ನಡೆಸುವ ಸಂಬಂಧ ಇನ್ನೊಂದು ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.