ಆರೋಗ್ಯವೇ ಮಹಾಭಾಗ್ಯ ಎಂದು ಹೇಳಲಾಗುತ್ತದೆ. ಆರೋಗ್ಯ ಇಲ್ಲ ಎಂದಾದ ಮೇಲೆ ಎಷ್ಟು ಐಶ್ವರ್ಯ, ಶ್ರೀಮಂತಿಕೆ ಇದ್ದರೂ ಕೂಡ ಅದು ನಗಣ್ಯ ಎನಿಸುತ್ತದೆ. ದೇಹದ ಆರೋಗ್ಯವನ್ನು, ಮನಸ್ಸಿನ ಆರೋಗ್ಯವನ್ನು ಜತನದಿಂದ ಕಾಪಾಡಿಕೊಂಡು ಬರಬೇಕಾದುದು ಅತ್ಯಂತ ಅವಶ್ಯಕವಾಗಿದೆ. ವಿಶ್ವ ಆರೋಗ್ಯ ದಿನವನ್ನು ಇಂದು ಆಚರಿಸಲಾಗುತ್ತಿದೆ. ನಿರ್ದಿಷ್ಟ ಆರೋಗ್ಯ ವಿಷಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ದಿನ ಹೊಂದಿದೆ. ವರ್ಷಗಳಿಂದ ಈ ದಿನ ಮಾನಸಿಕ ಆರೋಗ್ಯ, ತಾಯಿಯ, ಮಕ್ಕಳ ಆರೈಕೆ ಮತ್ತು ಹವಾಮಾನ ಬದಲಾವಣೆಯಂತಹ ಪ್ರಮುಖ ಆರೋಗ್ಯ ಸಮಸ್ಯೆಗಳನ್ನು ಬೆಳಕಿಗೆ ತಂದಿದೆ.
1950ರ ಏಪ್ರಿಲ್ 7 ರಂದು ಪ್ರಥಮ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ವಿಶ್ವ ಆರೋಗ್ಯ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ. ಅಂದಿನಿಂದ ವಿಶ್ವ ಆರೋಗ್ಯ ಸಂಸ್ಥೆ ಪ್ರತಿವರ್ಷವೂ ಒಂದು ವಿಷಯದ ಮೇಲ್ಪಂಕ್ತಿಯನ್ನು ಆರಿಸಿ ಆ ವಿಷಯದ ಕುರಿತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶ್ವದೆಲ್ಲೆಡೆ ಅನುಷ್ಠಾನಗೊಳಿಸಲು ವಿವಿಧ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದೆ.
ಈ ವರ್ಷದ ವಿಶ್ವ ಆರೋಗ್ಯ ದಿನದ ವಿಷಯವೆಂದರೆ ಉತ್ತಮ, ಆರೋಗ್ಯಕರ ಜಗತ್ತನ್ನು ನಿರ್ಮಿಸುವುದು.
ವಿಶ್ವ ಆರೋಗ್ಯ ದಿನವು ಜಾಗತಿಕ ಆರೋಗ್ಯದ ಪ್ರಮುಖ ಅಂಶಗಳ ಬಗ್ಗೆ ವಿಶ್ವಾದ್ಯಂತ ಗಮನವನ್ನು ಕೇಂದ್ರೀಕರಿಸಲು ಅವಕಾಶವನ್ನು ಒದಗಿಸುತ್ತದೆ. ಈ ದಿನವನ್ನು ಆಚರಿಸಲು, ಪ್ರಪಂಚದಾದ್ಯಂತ ಜನರು ಆರೋಗ್ಯದ ವಿಷಯಗಳಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಇದು ಸಾಮಾನ್ಯವಾಗಿ ಆರೋಗ್ಯಕರ ಜಗತ್ತನ್ನು ಉತ್ತೇಜಿಸಲು ಪ್ರಯತ್ನಿಸುವ ಹೊಸ ಅಭಿಯಾನದ ಆರಂಭವನ್ನು ಸೂಚಿಸುವ ದಿನ.
ವಿಶ್ವ ಆರೋಗ್ಯ ದಿನವನ್ನು ಇಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ, ಹಲವಾರು ಜನರು ಆರೋಗ್ಯ ಸೇವೆಗಳಿಗೆ ಪ್ರವೇಶವನ್ನು ಹೊಂದಲು ಹೆಣಗಾಡುತ್ತಾರೆ. ಇದು ಅನಗತ್ಯ ದುಃಖ ಮತ್ತು ಅಕಾಲಿಕ ಮರಣಕ್ಕೆ ಕಾರಣವಾಗುತ್ತದೆ, ಅದು ನಮ್ಮ ಸಮಾಜ ಮತ್ತು ಆರ್ಥಿಕತೆಗೆ ಹಾನಿ ಮಾಡುತ್ತದೆ. ಆರೋಗ್ಯ ಅಸಮಾನತೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಎಲ್ಲಾ ಜನರು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಸಮರ್ಥರಾಗುವಂತೆ ವಿಶ್ವ ನಾಯಕರು ವಿಶ್ವ ನಾಯಕರನ್ನು ಕೋರಿದ್ದಾರೆ.
ಪ್ರಸ್ತುತ ಇಡೀ ಜಗತ್ತು ಕರೋನವೈರಸ್ ಎಂಬ ಮಹಾ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದೆ. ಇದರ ವಿರುದ್ಧ ಇಡೀ ಜಗತ್ತೇ ಒಗ್ಗಟ್ಟಾಗಿ ಹೋರಾಟವನ್ನು ನಡೆಸುತ್ತಿದೆ. ಈ ಸಂದರ್ಭದಲ್ಲಿ ವಿಶ್ವ ಆರೋಗ್ಯ ದಿನ ಹೆಚ್ಚು ಮಹತ್ವಪೂರ್ಣ ಎನಿಸಿದೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಎಲ್ಲಾ ಸಂದರ್ಭದಲ್ಲೂ ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನರ ಆರೋಗ್ಯ ಕಾಪಾಡುವಲ್ಲಿ ನಿರತರಾಗಿರುವ ಆರೋಗ್ಯ ಸೇವಕರ, ವೈದ್ಯಕಿಯ ಸಿಬ್ಬಂದಿಯ ಸೇವೆಯನ್ನು ಕೃತಜ್ಞತೆಯಿಂದ ನೆನೆಯುವ ದಿನವೂ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.