ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದಿನಿಂದ ಸೆಕ್ಷನ್ 144 ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ತೀವ್ರತೆಯನ್ನು ಹತೋಟಿಗೆ ತರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಮೂಲಗಳು ತಿಳಿಸಿದೆ. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈ ಹಿಂದೆ ಹಲವು ಕಠಿಣ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿತ್ತು. ಹೀಗಿದ್ದರೂ ಕೊರೋನಾ ಪ್ರಮಾಣ ಮಾತ್ರ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲು ಮುಂದಾಗಿರುವುದಾಗಿ ಮೂಲಗಳು ಹೇಳಿವೆ.
ರಾಜ್ಯದಲ್ಲಿ ನಿನ್ನೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 6150 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ 45 ಸಾವಿರಕ್ಕೂ ಅಧಿಕ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ. ಹಾಗೆಯೇ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಒಂದೇ ದಿನದಲ್ಲಿ 39 ಮಂದಿ ಸಾವನ್ನಪ್ಪಿದ್ದು, ಈ ವರೆಗೆ ಮೃತಪಟ್ಟವರ ಸಂಖ್ಯೆ 12,696 ಕ್ಕೆ ಏರಿಕೆಯಾದಂತಾಗಿದೆ.
CORRECTION | Karnataka: In wake of #COVID19 situation in Bengaluru, restrictions under* Sec 144 CrPC to be imposed in city from today
"Prohibit operation of amenities like Swimming Pool, Gymnasium, Party Halls in apartment/residential complexes in Bengaluru City" reads the order
— ANI (@ANI) April 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.