ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವದ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಮೊದಲನೇ ಹಂತದಲ್ಲಿ ಈ ಅನುದಾನವನ್ನು ಒದಗಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಮತ್ತಷ್ಟು ಅನುದಾನವನ್ನು ಒದಗಿಸಿಕೊಡಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕುಡಿಯುವ ನೀರಿಗೆ ಅಗತ್ಯವಿರುವ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆಯೂ, ಅದರಂತೆ ಮೊದಲನೇ ಮತ್ತು ಎರಡನೇ ಹಂತದಲ್ಲಿ ಎಷ್ಟು ಮೊತ್ತದ ಅಗತ್ಯವಿದೆ ಎಂಬುದರ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಸೂಚಿಸಲಾಗಿದೆ. ಇದರಲ್ಲಿ ಯಾವುದೇ ವಿಳಂಬ ನೀತಿಯನ್ನು ಅನುಸರಣೆ ಮಾಡುವಂತಿಲ್ಲ ಎಂದು ಸರ್ಕಾರ ತಿಳಿಸಿದೆ. ಅಲ್ಲದೆ ಈ ಬಗ್ಗೆ ವರದಿ ಬಂದ ಕೂಡಲೇ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಸರ್ಕಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿದ್ದಾರೆ.
ರಾಜ್ಯದ ಯಾವುದೇ ಭಾಗದಲ್ಲಿ ಜನರಿಗೆ ನೀರಿನ ಅಭಾವ ಸೃಷ್ಟಿಯಾಗದಂತೆ ಕ್ರಮ ವಹಿಸುವ ಕೆಸಲವನ್ನು ಸರ್ಕಾರ ಮಾಡುತ್ತದೆ. ಈ ಸಂಬಂಧ ಎಲ್ಲಾ ಜಿಲ್ಲಾ ಪಂಚಾಯತ್ಗಳಿಗೂ ಈಗಾಗಲೇ ಸೂಚನೆ ನೀಡಲಾಗಿದ್ದು, ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸಿಎಂ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.