ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ ಕೆ ಸುಧಾಕರ್ ಅವರು 13 ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಸುಮಾರು 2 ಗಂಟೆಗಳ ಕಾಲ ಸಭೆ ನಡೆಸಿದ ಅವರು, ಕೋವಿಡ್ ವ್ಯಾಪಿಸುವ ತೀವ್ರತೆಯ ಬಗ್ಗೆ ಸೋಂಕು ನಿಯಂತ್ರಣದ ಬಗ್ಗೆ ಚರ್ಚಿಸಿದರು. ರಾಜ್ಯದ 13 ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತಗಳಿಗೂ ಸೂಕ್ತ ಮಾರ್ಗದರ್ಶನಗಳನ್ನು ಸರ್ಕಾರ ನೀಡಿದೆ. ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ, ಅದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.
ನಮ್ಮ ಕಲ್ಪನೆಗಳನ್ನು ಮೀರಿ ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಸಮರ್ಪಕ ವ್ಯಾಕ್ಸಿನೇಷನ್, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವುದು, ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದು ಮೊದಲಾದವುಗಳ ಬಗೆಗೂ ಚಿಂತನೆ ನಡೆಸಲಾಗಿದೆ. ಕೆಲವು ಸ್ಥಳಗಳಲ್ಲಿ 100 ಕ್ಕಿಂತ ಎಚ್ಚು ಜನರಿರುವಲ್ಲಿಗೆ ಸರ್ಕಾರದ ವತಿಯಿಂದಲೇ ಲಸಿಕೆ ನೀಡಿಕೆಯ ಕೆಲಸ ಮಾಡಲಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.