ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಇಲಾಖೆಯ ನೌಕರರು ಮುಷ್ಕರ ನಡೆಸುತ್ತಿದ್ದು, ಸ್ವಯಂ ಪ್ರೇರಿತರಾಗಿ ಕರ್ತವ್ಯ ನಿರ್ವಹಣೆಗೆ ಹಾಜರಾಗುವ ಸಿಬ್ಬಂದಿಗಳಿಗೆ ಅಗತ್ಯ ಭದ್ರತೆ ಒದಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸ್ವಯಂ ಪ್ರೇರಿತರಾಗಿ ಕರ್ತವ್ಯ ನಿರ್ವಹಣೆಗೆ ಹಾಜರಾಗುವ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆಯನ್ನು ಸರ್ಕಾರ ಒದಗಿಸುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸಾರಿಗೆ ನೌಕರರ ಮುಷ್ಕರದಿಂದ ಸರ್ಕಾರಿ ಬಸ್ಸುಗಳು ಸೇವೆ ನೀಡುತ್ತಿಲ್ಲ. ಇದರಿಂದಾಗಿ ಜನಸಾಮಾನ್ಯರು, ಪ್ರಯಾಣಿಕರು ಪರಿತಪಿಸುವಂತಾಗಿದೆ. ಮುಷ್ಕರದಿಂದ ಸಾರಿಗೆ ಸಂಸ್ಥೆಯೂ ದೊಡ್ಡ ಪ್ರಮಾಣದಲ್ಲಿ ನಷ್ಟವನ್ನು ಅನುಭವಿಸುವಂತಾಗಿದೆ. ಸಾರಿಗೆ ಸಂಸ್ಥೆ ಉಳಿಯಬೇಕು, ನೌಕರರಿಗೂ ಉತ್ತಮ ವೇತನ ದೊರಕಬೇಕು ಎಂದಾದಲ್ಲಿ ಅದು ದುಡಿಮೆಯೊಂದರಿಂದ ಮಾತ್ರವೇ ಸಾಧ್ಯ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.