ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ನಿಗದಿ ಮಾಡಲಾಗಿದ್ದ ಪಥ್ಯಗಳ ಬೋಧನೆ ಮುಗಿದಿದ್ದು, ಪುನರಾವರ್ತನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರೇರೇಪಿಸಬೇಕು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ನೋಂದಾಯಿಸಿಕೊಂಡಿರುವ ಪ್ರತಿಯೋರ್ವ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕು. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಪರೀಕ್ಷೆಯ ಫಲಿತಾಂಶ ಗುಣಾತ್ಮಕವಾಗಿರುವತ್ತಲೂ ಹೆಚ್ಚು ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.
ಪರೀಕ್ಷಾ ಸಂಬಂಧ ಅಧಿಕಾರಿಗಳು ತಾಲೂಕು, ಹೋಬಳಿ ಮಟ್ಟದಲ್ಲಿ ಮುಖ್ಯ ಶಿಕ್ಷಕರ ಜೊತೆಗೆ ಸಭೆ ನಡೆಸಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು, ಪರೀಕ್ಷೆಗಾಗಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಸೇರಿದಂತೆ ಇನ್ನಿತರ ಅಗತ್ಯ ವಿಚಾರಗಳ ಬಗ್ಗೆ ಗಮನ ಹರಿಸುವಂತೆಯೂ ಸಚಿವರು ಸೂಚಿಸಿದರು. ಜೊತೆಗೆ ಪರೀಕ್ಷೆಗೆ ನೋಂದಾಯಿಸಿಕೊಂಡು ತರಗತಿಗಳಿಗೆ ಹಾಜರಾಗದ ವಿದ್ಯಾರ್ಥಿಗಳೂ ಪರೀಕ್ಷೆಗೆ ಹಾಜರಾಗುವಂತೆ ಕ್ರಮ ವಹಿಸಲು ತಿಳಿಸಿದ್ದಾರೆ. ಜೊತೆಗೆ ಪಠ್ಯಗಳು ಬಾಕಿ ಉಳಿದಿದ್ದರೆ ಅವುಗಳನ್ನು ಸಂಪೂರ್ಣಗೊಳಿಸುವ ನಿಟ್ಟಿನಲ್ಲಿಯೂ ಪೂರಕ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.