ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅತೀ ಹೆಚ್ಚು ಕೊರೋನಾ ಪೀಡಿತ ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ಮಂಗಳೂರು, ಉಡುಪಿ, ಬೀದರ್, ಕಲಬುರ್ಗಿ, ಮೈಸೂರು, ತುಮಕೂರು, ಮಣಿಪಾಲಗಳಲ್ಲಿ ರಾತ್ರಿ 10 ರಿಂದ 5 ರ ವರೆಗೆ ರಾತ್ರಿ ಕರ್ಫ್ಯೂ ಹೇರಿ ಆದೇಶ ಹೊರಡಿಸಲಾಗಿದೆ. ಎ. 10 ರಿಂದ 20 ರ ವರೆಗೆ ನೈಟ್ ಕರ್ಫ್ಯೂ ಇರಲಿದೆ.
ಹಾಗೆಯೇ ಮಾಸ್ಕ್ ಧರಿಸದೇ ಹೋದಲ್ಲಿ ದಂಡದ ಮೊತ್ತ ಸಹ ಏರಿಕೆಯಾಗಲಿದೆ. ಕೊರೋನಾ ಬಗ್ಗೆ ಜನರಲ್ಲಿ ಎಚ್ಚರ ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಕೊರೋನಾ ಹಿನ್ನೆಲೆಯಲ್ಲಿ ನಡೆದ ವರ್ಚುವಲ್ ಸಭೆಯ ಬಳಿಕ ಸಿಎಂ ಬಿಎಸ್ವೈ ಈ ಆದೇಶ ಹೊರಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.