ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಇಂದು ನಾಲ್ಕನೇ ಹಂತದ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾರರಿಗೆ ಶನಿವಾರ ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.
“ಪಶ್ಚಿಮ ಬಂಗಾಳ ಚುನಾವಣೆಯ 4 ನೇ ಹಂತವು ಪ್ರಾರಂಭವಾಗುತ್ತಿದೆ, ಇಂದು ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜನರನ್ನು ಒತ್ತಾಯಿಸುತ್ತೇನೆ. ವಿಶೇಷವಾಗಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ” ಎಂದು ಮತದಾನ ಪ್ರಾರಂಭವಾದ ಕೂಡಲೇ ಪ್ರಧಾನಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ 44 ಕ್ಷೇತ್ರಗಳಿಗೆ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಗೆ ಬಿಗಿ ಭದ್ರತೆಯ ಮಧ್ಯೆ ಪ್ರಾರಂಭವಾಗಿದೆ.
ಈ ಹಂತದ ಚುನಾವಣೆಯು ಕೂಚ್ ಬೆಹಾರ್, ಅಲಿಪುರ್ದಾರ್, ದಕ್ಷಿಣ 24 ಪರಗಣ, ಹೌರಾ ಮತ್ತು ಹೂಗ್ಲಿ ಎಂಬ ಐದು ಜಿಲ್ಲೆಗಳ 44 ಕ್ಷೇತ್ರಗಳಲ್ಲಿ 373 ಅಭ್ಯರ್ಥಿಗಳ ನಡುವೆ ತೀವ್ರ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿದೆ.
As the 4th phase of the West Bengal elections begin, urging the people voting today to do so in record numbers. I would especially request the youth and women to vote in large numbers.
— Narendra Modi (@narendramodi) April 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.