ಬೀದರ್: ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಎ. 18 – 19 ರಂದು ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸರ್ವ ಪಕ್ಷಗಳ ಹಿರಿಯರ ಜೊತೆಗೆ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ಅವರಿಂದ ಸಲಹೆ ಪಡೆಯುವುದಾಗಿ ತಿಳಿಸಿದ್ದಾರೆ.
ವಿಪಕ್ಷ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಇನ್ನೂ ಹಲವು ಮಂದಿ ಗಣ್ಯರ ಜೊತೆಗೆ ಮುಖ್ಯಮಂತ್ರಿಗಳು ಸಭೆ ನಡೆಸಿ ನಿರ್ಣಯಗಳನ್ನು ತೆಗೆದುಕೊಳ್ಳಲಿರುವುದಾಗಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗೆಗೂ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.
ಸದ್ಯ ರಾಜ್ಯದ ಕೆಲವು ಜಿಲ್ಲೆಗಳಲ್ಲಷ್ಟೇ ಕೊರೋನಾ ಸೋಂಕು ತೀವ್ರವಾಗಿ ಹರಡಿದೆ. ಹೀಗೆಯೇ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ. ಕೊರೋನಾ ಸೋಂಕು ಇದೇ ವೇಗದಲ್ಲಿ ಮುಂದುವರಿದರೆ ರಾಜ್ಯದಲ್ಲಿ ಮತ್ತೆ ಹಲವು ಕಡೆಗಳಲ್ಲ ನೈಟ್ ಕರ್ಫ್ಯೂ ಹೇರುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಜೊತೆಗೆ ಪರಿಸ್ಥಿತಿ ಹೀಗೆಯೇ ಮುಂದುವರಿದಲ್ಲಿ ಲಾಕ್ಡೌನ್ ಹೇರುವ ಪರಿಸ್ಥಿತಿಯನ್ನೂ ತಳ್ಳಿ ಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.