ಬಳ್ಳಾರಿ: ಕೇಂದ್ರ ಸರ್ಕಾರದ ಪ್ರಬುದ್ಧ ಯೋಜನೆಗೆ ಬಳ್ಳಾರಿಯ ಸಂಡೂರು ತಾಲೂಕಿನ ಯಶವಂತನಗರ ಹಳ್ಳಿಯನ್ನು ಆಯ್ಕೆ ಮಾಡಿದೆ. ಈ ಯೋಜನೆಗೆ ಒಟ್ಟು ಏಳು ಗ್ರಾಮಗಳು ಆಯ್ಕೆಯಾಗಿವೆ. ಯಶವಂತನಗರ ಇಡೀ ದಕ್ಷಿಣ ಭಾರತದಲ್ಲಿಯೇ ಈ ಯೋಜನೆಗೆ ಆಯ್ಕೆಯಾಗಿರುವ ಏಕೈಕ ಗ್ರಾಮ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಈ ಗ್ರಾಮವು ಸಂಡೂರಿನಿಂದ 13 ಕಿಲೋ ಮೀಟರ್ ದೂರದಲ್ಲಿದ್ದು, ಗಣಿಗಾರಿಕೆಯೂ ನಡೆಯುವಂತಹ ಪ್ರದೇಶಗಳಿವೆ. 9000 ಜನಸಂಖ್ಯೆ, 75% ಗಳಷ್ಟು ಸಾಕ್ಷರತಾ ಪ್ರಮಾಣ, ಮೂಲಭೂತ ಸೌಕರ್ಯ, ಸ್ವಚ್ಛತೆ, ಡಿಜಿಟಲೀಕರಣ ಮೊದಲಾದ ಅಂಸಗಳನ್ನು ಆಧರಿಸಿಕೊಂಡು ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಪ್ರಾಯೋಗಿಕ ಆಧಾರದ ಮೇಲೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಉತ್ತಮ ರಸ್ತೆಗಳು, ವಿದ್ಯುತ್, ಆಸ್ಪತ್ರೆ, ಕುಡಿಯುವ ನೀರು, ಒಳಚರಂಡಿ ಸೌಲಭ್ಯಳನ್ನೊಳಗೊಂಡಂತೆ ಇನ್ನಿತರ ಎಲ್ಲಾ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುತ್ತದೆ. ಕೇಂದ್ರ ಸರ್ಕಾರದ ಈ ಯೋಜನೆ ಯಶವಂತ ನಗರಕ್ಕೆ ಮುಂದಿನ ದಿನಗಳಲ್ಲಿ ವರದಾನವಾಗಿ ಪರಿಗಣಿತವಾಗಲಿದೆ ಎಂಬುದನ್ನೂ ಅಲ್ಲಗಳೆಯುವಂತಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.