News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

24ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ಅಧಿಕಾರ ಸ್ವೀಕಾರ

ನವದೆಹಲಿ: ದೇಶದ 24ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿರಿಯ ಚುನಾವಣಾ ಆಯುಕ್ತರಾದ ಸುಶೀಲ್ ಚಂದ್ರ ಅವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಸೋಮವಾರ ನೇಮಿಸಿದ್ದರು. ಅದರಂತೆ ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಇದುವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರ ಸೇವಾ ಅವಧಿ ಇಂದಿಗೆ ಅಂತ್ಯಗೊಂಡಿದೆ.

ಸುಶೀಲ್‌ ಚಂದ್ರ ಅವರು ಚುನಾವಣಾ ಆಯೋಗಕ್ಕೆ ನೇಮಕಗೊಳ್ಳುವ ಮೊದಲು ಅವರು ಕೇಂದ್ರೀಯ ನೇರ ತೆರಿಗೆ ಮಂಡಳಿಯ ಸಿಬಿಡಿಟಿ ಅಧ್ಯಕ್ಷರಾಗಿದ್ದರು.

ಸುಶೀಲ್‌ ಚಂದ್ರ ಅವರ ನೇತೃತ್ವದಲ್ಲಿ ಗೋವಾ, ಮಣಿಪುರ, ಉತ್ತರಾಖಂಡ, ಪಂಜಾಬ್‌ ಮತ್ತು ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top